ಮೈಸೂರು: ಮೈಮೇಲೆ ಬಿಸಿ ನೀರು ಬಿದ್ದು 2 ವರ್ಷದ ಮಗು ಸಾವು

ಮೈಸೂರು: ತಿಳಿಯದೆ ಅಕಸ್ಮಾತ್‌ ಆಗಿ ಮೈಮೇಲೆ ಬಿಸಿ ನೀರು ಚೆಲ್ಲಿಕೊಂಡಿದ್ದ  2 ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತ ಮಗು ಎಂದು ಗುರುತಿಸಲಾಗಿದೆ.
ಸ್ನಾನ ಮಾಡಿಸುವಾಗ ತಣ್ಣೀರು ತರಲು ತಾಯಿ ಹೋಗಿದ್ದ ವೇಳೆ ತಿಳಿಯದೆ ಮಗು ಮೈಮೇಲೆ ಬಿಸಿ ನೀರು ಸುರಿದುಕೊಂಡಿದೆ. ಸುಟ್ಟು ಗಂಭೀರವಾಗಿ  ಗಾಯಗೊಂಡಿದ್ದ ಆದ್ಯಾಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆ.ಆರ್.ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

0 / 5. 0

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement