ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ : ಚರ್ಚೆಗೆ ಗ್ರಾಸ

ಬೆಂಗಳೂರು: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕ ವಸೂಲಿ ಮಾಡಿ, ಕ್ರೀಡಾ ನಿಧಿ ಖಾತೆಗೆ ಜಮಾ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ. 6,7 ನೇ ತರಗತಿ ವಿದ್ಯಾರ್ಥಿಗಳಿಂದ 5 ರೂ ಹಾಗೂ 8,9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ 15ರೂ ಕ್ರೀಡಾ ನಿಧಿ ಸಂಗ್ರಹಿಸುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಕ್ರೀಡಾ ಚಟುವಟಿಕೆಗಳು ನಡೆಯದೆ ಇದ್ದರೂ ಈ ಆದೇಶ ಹೊರಬಿದ್ದುರುವುದು ಈಗ ಚರ್ಚೆಗೆ ಗ್ರಾಸ ಒದಗಿಸಿದೆ.
2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕವನ್ನು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಸೂಲಿ ಮಾಡುವಂತೆ ತೀರ್ಮಾನಿಸಲಾಗಿದೆ. ಅದರನ್ವಯ ರಾಜ್ಯದ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಲ್ಲಿನ 6ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 6 ಮತ್ತು 7ನೇ ತರಗತಿ ಮಕ್ಕಳಿಂದ ತಲಾ ರೂ.5ರಂತೆ 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಂದ ತಲಾ ರೂ, 15ರಂತೆ ವಸೂಲಿ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಆಯಾ ಜಿಲ್ಲೆಯ ವ್ಯಾಪ್ತಿಯ ಉಪನಿರ್ದೇಶಕರು ಸಂಗ್ರಹಿಸಿ, ರಾಜ್ಯ ವಿದ್ಯಾರ್ಥಿ ಕ್ರೀಡಾ ನಿಧಿಯ ಖಾತೆಗೆ ಜಮಾ ಮಾಡುವಂತೆ ತಿಳಿಸಿ, ಎಲ್ಲಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement