ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

ಪುತ್ತೂರು: ಉಪ್ಪಿನಂಗಡಿ ಠಾಣೆಯ ಎದುರು ಮಂಗಳವಾರ ಸಂಜೆ ಪಿಎಫ್ ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದು ಪೊಲೀಸರು ಮತ್ತು ಪ್ರತಿಭಟನಾಕಾರರು ಗಾಯಗೊಂಡ ಬೆನ್ನಲ್ಲೇ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144ರ ಅನ್ವಯ ಇಂದಿನಿಂದ ಡಿ.17ರ ಮಧ್ಯರಾತ್ರಿ ವರೆಗೆ ನಿಷೇದಾಜ್ಞೆ ವಿಧಿಸಿ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ನಡೆದ ತಲವಾರ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಆರೋಪಿಸಿ ಪಿಎಫ್ಐ ಸಂಘಟನೆ ನಿನ್ನೆ ಬೆಳಿಗ್ಗೆಯಿಂದ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿತ್ತು.
ಪಿಎಫ್‌ಐ ಮುಖಂಡರನ್ನು ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಪಿಎಫ್‌ಐ ಕಾರ್ಯಕರ್ತರು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ಮೊದಲು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಸಂಜೆಯಾಗುತ್ತಿದ್ದಂತೆ ಘರ್ಷಣೆಗೆ ತಿರುಗಿದ್ದು, ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದರು. ಈ ಸಂದರ್ಭ ಪಿಎಫ್ಐ ಕಾರ್ಯಕರ್ತರು ಹಾಗೂ ಕೆಲ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿತ್ತು.
ಈ ಹಿನ್ನಲೆಯಲ್ಲಿ ಇನ್ನಷ್ಟು ಪ್ರತಿಭಟನೆಗೆ ಕಾರಣವಾಗಬಹುದು ಕಾರಣದಿಂದ ಮೊದಲೇ ನಿಷೇಧಾಜ್ಞೆ ವಿಧಿಸಲಾಗಿದೆ

ಪ್ರಮುಖ ಸುದ್ದಿ :-   ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ಎಇಇ 40 ದಿನಗಳ ನಂತರ ಮುಂಬೈನಲ್ಲಿ ಪತ್ತೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement