ಧಾರವಾಡ ಜೆಎಸ್ಎಸ್ ಸಂಸ್ಥೆ ವಿದ್ಯಾರ್ಥಿನಿ ಸ್ನೇಹಾ ದೆಹಲಿ ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಕಲಾ ವಿಭಾಗದಲ್ಲಿ ಬಿ.ಎ ೫ನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿರುವ ಸ್ನೇಹಾ ಅಂಬಡಗಟ್ಟಿ ಎನ್.ಎಸ್.ಎಸ್ ವತಿಯಿಂದ ಜನೇವರಿ ೨೬ ರಂದು ದೆಹಲಿಯಲ್ಲಿ ನಡೆಯಲಿರುವ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾಳೆ.
ಸ್ನೇಹಾ ಅಂಬಡಗಟ್ಟಿ ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಆಗಿದ್ದಾಳೆ. ಸ್ನೇಹಾ ಅಂಬಡಗಟ್ಟಿ ಅವರನ್ನು ಜನತಾ ಶಿಕ್ಷಣ ಸಮಿತಿಯ ಪರವಾಗಿ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಅಭಿನಂದಿಸಿದರು. ಪ್ರಾಚಾರ್ಯರಾದ ಡಾ. ಇಂದು ಪಂಡಿತ್, ಎನ್.ಎಸ್.ಎಸ್ ಘಟಕದ ಅಧಿಕಾರಿಗಳಾದ ಡಾ. ಆರ್.ಟಿ ಮಹೇಶ ಉಪಸ್ಥಿತರಿದ್ದರು.

0 / 5. 0

ಪ್ರಮುಖ ಸುದ್ದಿ :-   ನಾಳೆ (ಮೇ21) ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ; 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement