ಕುಲ್ಗಾಮ್‌ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ದಾಳಿಯಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಭದ್ರತಾ ಪಡೆಗಳು ಹೊಡೆದು ಉರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ರೆಡ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಮತ್ತೆ ಎನ್‌ಕೌಂಟರ್‌ ನಡೆದಿದೆ. ಈ ಬಗ್ಗೆ ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇಬ್ಬರು ಉಗ್ರರನ್ನು ಹತ್ಯೆ ಭದ್ರಾ ಪಡೆಗಳು ಹತ್ಯೆ ಮಾಡಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರ ಗಳನ್ನು ವಶಪಡಿಸಿಕೊಂಡಿದ್ದಾರೆ. ಇವರು ಯಾವ ಉಗ್ರರ ಗುಂಪಿಗೆ ಸೇರಿದ್ದರು, ಇವರ ಹೆಸರೇನು ಎನ್ನುವುದರ ಬಗ್ಗೆ ತನಿಖೆ ಪ್ರಾರಂಭವಾಗಿದೆ ಎಂದು ತಮ್ಮ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಕಾಶ್ಮೀರದ ಪೂಂಚ್‌ನ ಸುರನ್ ಕೋಟ್ ಪ್ರದೇಶದಲ್ಲಿ ಮೋಸ್ಟ್ ವಾಂಟೆಡ್ ಪಾಕಿಸ್ತಾನಿ ಭಯೋತ್ಪಾದಕ ಅಬು ಜರಾನ್ ನನ್ನು ಹತ್ಯೆ ಮಾಡಿರುವುದಾಗಿ ಭಾರತೀಯ ಸೇನೆ ಹೇಳಿಕೊಂಡಿತ್ತು.

ನಿಮ್ಮ ಕಾಮೆಂಟ್ ಬರೆಯಿರಿ

advertisement