ಬಿಜೆಪಿಯೊಂದಿಗೆ ಮೈತ್ರಿ : ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ಚಂಡೀಗಢ: ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿ ಮುಖ್ಯಮಂತ್ರಿಯಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪ್ರಕಟಿಸಿದ್ದಾರೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿದ್ದಾಗಿ ಸಿಂಗ್ ಹೇಳಿದ್ದಾರೆ.
ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ ಬಳಿಕ ಅಮರಿಂದರ್‌ ಸಿಂಗ್‌ ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆಗಾಗಿ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದೆ. ಸೀಟು ಹೊಂದಾಣಿಕೆ ಬಗ್ಗೆ ಎಂಬ ಬಗ್ಗೆ ಸದ್ಯದರಲ್ಲೇ ತಿಳಿಸಲಿದ್ದೇವೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಸಚಿವ ಹಾಗೂ ಪಂಜಾಬ್‌ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾದ ಫೋಟೊವನ್ನು ಕ್ಯಾಪ್ಟನ್‌ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement