ಜಪಾನ್​ನ ಒಸಾಕಾದಲ್ಲಿ ಅಗ್ನಿ ದುರಂತ; 27 ಜನರು ಸಾವು

ಟೋಕಿಯೊ: ಜಪಾನ್‌ನ ಒಸಾಕಾ ಜಿಲ್ಲೆಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ (ಡಿಸೆಂಬರ್ 17) ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಗ್ನಿಶಾಮಕ ಇಲಾಖೆ ತಿಳಿಸಿದೆ.
ಬೆಂಕಿಗೆ ಆಹುತಿಯಾದ ಮಹಡಿಯು ಮಾನಸಿಕ ಆರೋಗ್ಯ ಸೇವೆಗಳು ಮತ್ತು ಸಾಮಾನ್ಯ ವೈದ್ಯಕೀಯ ಆರೈಕೆಯನ್ನು ಒದಗಿಸುವ ಕ್ಲಿನಿಕ್ ಅನ್ನು ಹೊಂದಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.
ಒಸಾಕಾ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎಫ್‌ಪಿಗೆ ಈ ಕುರಿತು ಮಾಹಿತಿ ನೀಡಿ, ‘‘ದುರಂತದಲ್ಲಿ ಒಟ್ಟು 28 ಮಂದಿ ಸಿಲುಕಿದ್ದರು. ಅವರಲ್ಲಿ 27 ಜನರು ಮೃತಪಟ್ಟಿದ್ದು, ಶವಗಳನ್ನು ಆಸ್ಪತ್ರೆಗೆ ಒಯ್ಯಲಾಗಿದೆಜಪಾನ್ ಕಾಲಮಾನ ಬೆಳಿಗ್ಗೆ 10:18 ಕ್ಕೆ ನಾಲ್ಕನೇ ಮಹಡಿಯಲ್ಲಿ ಬೆಂಕಿ ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 70 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದವು.
ಪಶ್ಚಿಮ ಜಪಾನ್‌ನ ನಗರದ ಕಿಟಾಶಿಂಚಿ ರೈಲು ನಿಲ್ದಾಣದ ಬಳಿಯ ಜನನಿಬಿಡ ವ್ಯಾಪಾರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಅರ್ಧ ಗಂಟೆಯ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಮತ್ತು ಇತರ ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲ. ಕಟ್ಟಡದ ಇತರ ಮಹಡಿಯಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.ಒಸಾಕಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement