ರಮೇಶಕುಮಾರ ಸದನದಲ್ಲಿ ಮತ್ತೆ ವಿವಾದ ಮೈಮೇಲೆ ಎಳೆದುಕೊಂಡರೆ..?

ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ 6 ಗಂಟೆ ವರೆಗೆ ಸಮಯ ಕೊಡುತ್ತೇನೆ ಎಂದು ಸ್ಪೀಕರ್‌ ಹೇಳಿದರು.
ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನನಗೆ ಸದನದ ಕಲಾಪ ನಡೆಯುವುದು ಮುಖ್ಯ. ಇದು ನಿಮ್ಮದೇ ಸದನ, ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಎನ್ನುವ ರೀತಿ ಆಗಿದೆ ರಮೇಶ್ ಕುಮಾರ್ ಅವರೇ’ ಎಂದು ಹೇಳಿದರು. ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಎದ್ದುನಿಂತು ಪ್ರತಿಕ್ರಿಯಿಸಿದ ರಮೇಶ್​ಕುಮಾರ್, ಎ ಸೇಯಿಂಗ್‌ ಇನ್‌ ಇಂಗ್ಲಿಷ್‌…ವೆನ್‌ ರೇಪ್‌ ಇಸ್‌ ಇನ್ನೆವಿಟೆಬಲ್‌ ಲೇ ಡೌನ್‌ ಅಂಡ್‌ ಎಂಜಾಯ್‌ ಇಟ್‌ , ದತ್‌ ಇಸ್‌ ದ ಪೊಸಿಶನ್‌ ನೌ (ಹೀಗೊಂದು ಮಾತಿದೆ…ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಬೇಕು, ಅಂಥ ಸ್ಥಿತಿ ಈಗ ಇಲ್ಲೂ ಇದೆ) ಎಂದರು. ಇದಕ್ಕೆ ಸ್ಪೀಕರ್‌ ಕಾಗೇರಿ ನಕ್ಕು ಸುಮ್ಮನಾದರು.
ಈ ಹಿಂದಿನ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಸ್ಥಾನದಲ್ಲಿದ್ದಾಗಲೂ ರಮೇಶ್​ ಕುಮಾರ್ ಅವರು ಇಂಥದ್ದೇ ಹೇಳಿಕೆ ನೀಡಿದ್ದರು. ಬಿಜೆಪಿ ಅವರ ಹೇಳಿಕೆಯನ್ನು ಖಂಡಿಸಿ ರಾಜೀನಾಮೆಗೆ ಒತ್ತಾಯಿಸಿತ್ತು. ತಮ್ಮ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾದ ನಂತರ ಕ್ಷಮೆಯಾಚಿಸಿದ್ದರು. ಆದರೆ ಗುರುವಾರ ಸದನದಲ್ಲಿ ರಮೇಶ್​ ಕುಮಾರ್ ಮತ್ತೊಮ್ಮೆ ಅಂಥದ್ದೇ ಹೇಳಿಕೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement