ಬೆಳಗಾವಿ: ಗುರುವಾರ ಕರ್ನಾಟಕ ವಿಧಾನಸಭೆಯಲ್ಲಿ ಅತ್ಯಾಚಾರದ ಬಗೆಗಿನ ಹೇಳಿಕೆಗಾಗಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.
ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕ್ಷಮೆಯಾಚಿಸಿದ್ದಾರೆ.
ಈ ಹೇಳಿಕೆಯಿಂದ ಮಹಿಳೆಯರ ಭಾವನೆಗೆ ಧಕ್ಕೆ ಉಂಟಾದರೆ ಕ್ಷಮೆ ಯಾಚಿಸುವ ಸಮಸ್ಯೆ ಇಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ನಾನು ನನ್ನ ಹೃದಯದ ಕೆಳಗಿನಿಂದ ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದರು.
ಅವರು ಕಾಂಗ್ರೆಸ್ ಸೇರಿದಂತೆ ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸಿದ್ದಾರೆ. ಕ್ಷಮೆಯಾಚಿಸಿದ ಕೆ.ಆರ್.ರಮೇಶ್ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಅತಿವೃಷ್ಟಿ ಬಗ್ಗೆ ಸದನದಲ್ಲಿ ನಿಯಮ 69ರಡಿ ಚರ್ಚೆ ನಡೆಯುತ್ತಿದ್ದ ವೇಳೆ, ಎ ಸೇಯಿಂಗ್ ಇನ್ ಇಂಗ್ಲಿಷ್…ವೆನ್ ರೇಪ್ ಇಸ್ ಇನ್ನೆವಿಟೆಬಲ್ ಲೇ ಡೌನ್ ಅಂಡ್ ಎಂಜಾಯ್ ಇಟ್ , ದತ್ ಇಸ್ ದ ಪೊಸಿಶನ್ ನೌ (ಹೀಗೊಂದು ಮಾತಿದೆ…ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಬೇಕು, ಅಂಥ ಸ್ಥಿತಿ ಈಗ ಇಲ್ಲೂ ಇದೆ) ಎಂದು ಹೇಳಿದ್ದರು..
ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನಮಗೆ ಇರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ವಿಷಾದಿಸುವೆ. ದೇಶದ ಮಹಿಳೆಯರ ಭಾವನೆಗಳಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ. ಮುಕ್ತ ಮನಸ್ಸಿನಿಂದ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ವಿಧಾನಸಭೆಯಲ್ಲಿ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ.
ಹೆಣ್ಣಿಗೆ ಅಪಮಾನಿಸುವ, ಲಘುವಾಗಿ ಮಾತಾಡುವ ಉದ್ದೇಶ ಇಲ್ಲ. ವಿಷಾದ ವ್ಯಕ್ತಪಡಿಸಲು ನನಗೆ ಯಾವುದೇ ರೀತಿಯ ಪ್ರತಿಷ್ಠೆ ಇಲ್ಲ. ಗ್ರಹಚಾರಕ್ಕೆ ಸ್ಪೀಕರ್ ನನ್ನ ಹೆಸರು ಹೇಳಿದಾಗ ಪ್ರತಿಕ್ರಿಯಿಸಿದ್ದೆ. ಹೆಸರಾಂತ ಇಂಗ್ಲಿಷ್ ಚಿಂತಕರ ಹೇಳಿಕೆಯನ್ನು ಉಲ್ಲೇಖಿಸಿದ್ದೆ ಅಷ್ಟೇ. ಈ ವಿಚಾರಕ್ಕೆ ಇಲ್ಲಿಗೇ ಅಂತ್ಯ ಹಾಡಿ ಕಲಾಪ ಮುಂದುವರಿಸೋಣ. ನನ್ನ ಹೇಳಿಕೆಗೆ ಕ್ಷಮೆಯಾಚಿಸುತ್ತಿದ್ದೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ