ಫ್ಯೂಚರ್ ಗ್ರೂಪ್‌ನೊಂದಿಗಿನ 2019ರ ಒಪ್ಪಂದ ಅಮಾನತು ಮಾಡಿ, ಅಮೆಜಾನ್‍ಗೆ 202 ಕೋಟಿ ರೂ. ದಂಡ ವಿಧಿಸಿದ ಸ್ಪರ್ಧಾತ್ಮಕ ಆಯೋಗ

ನವದೆಹಲಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಅಮೆರಿಕದ ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತು ಭಾರತದ ಫ್ಯೂಚರ್ ಗ್ರೂಪ್ ಜೊತೆಗಿನ 2019ರ ಒಪ್ಪಂದವನ್ನು ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ಅಮಾನತುಗೊಳಿಸಿದ್ದು, ಅಮೆಜಾನ್‍ಗೆ 202 ಕೋಟಿ ರೂ.ಗಳ ದಂಡ ವಿಧಿಸಿದೆ.
ಭಾರತದ ಫ್ಯೂಚರ್ ಗ್ರೂಪ್ ಜೊತೆ ಅಮೆರಿಕಾದ ಅಮೆಜಾನ್ 2019ರಲ್ಲಿ ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಈ ನಡುವೆ ಫ್ಯೂಚರ್ ಗ್ರೂಪ್ 2019ರಲ್ಲಿ 24,713 ಕೋಟಿ ರೂಪಾಯಿಯ ತನ್ನ ರಿಟೇಲ್‍ನ ಸಗಟು ಮತ್ತು ಇತರೆ ವಹಿವಾಟುಗಳನ್ನು ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಗೆ ಮಾರಾಟ ಮಾಡಲು ಯತ್ನಿಸಿತು. ಆಗ ಅಮೆಜಾನ್ ಇದ್ದಕ್ಕೆ ತಕರಾರು ಎತ್ತಿತ್ತು.
ಮಾರಾಟಕ್ಕೆ ಅಪಸ್ವರ ಎತ್ತಿದ್ದಕ್ಕೆ ಫ್ಯೂಚರ್ ಗ್ರೂಪ್ ಸಿಸಿಐಗೆ ದೂರು ದಾಖಲಿಸಿತ್ತು. ಅದರ 57-ಪುಟದ ಆದೇಶದಲ್ಲಿ, ಸಿಸಿಐ “ಡೀಲ್ ಅನ್ನು ಹೊಸದಾಗಿ ಪರಿಶೀಲಿಸುವುದು ಅವಶ್ಯಕ” ಎಂದು ಪರಿಗಣಿಸುತ್ತದೆ ಎಂದು ಹೇಳಿದೆ. ಜೊತೆಗೆ ಈ ಹಿಂದೆ 2019ರಲ್ಲಿ ಮಾಡಿದ ಡೀಲ್‍ಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗಿದೆ. ಹಾಗಾಗಿ ಅಲ್ಲಿಯ ವರೆಗೆ 2019ರಲ್ಲಿ ನೀಡಲಾಗಿರುವ ಅನುಮೋದನೆ ಸ್ಥಗಿತವಾಗಿರುತ್ತದೆ ಎಂದು ಆದೇಶಿಸಿದೆ. ಇದರಿಂದ ಅಮೆಜಾನ್‍ಗೆ ಹಿನ್ನಡೆ ಉಂಟಾಗಿದೆ.ಈ ನಿರ್ಧಾರವು ಫ್ಯೂಚರ್ ಗ್ರೂಪ್‌ನೊಂದಿಗೆ ಅಮೆಜಾನ್‌ನ ನಡೆಯುತ್ತಿರುವ ಕಾನೂನು ಹೋರಾಟಕ್ಕೆ ದೂರಗಾಮಿ ಪರಿಣಾಮಗಳನ್ನು ಉಂಟುಮಾಡಬಹುದು.
ಅಮೆಜಾನ್ ಏನು ಹೇಳುತ್ತದೆ?
2019ರ ಹೂಡಿಕೆ ಒಪ್ಪಂದ ಪ್ರಕಾರ, ಫ್ಯೂಚರ್ ಗ್ರೂಪ್‍ನಲ್ಲಿ ನಾವು 1,460 ಕೋಟಿ ಹೂಡಿಕೆ ಮಾಡಿದ್ದೇವೆ. ಒಪ್ಪಂದ ಪ್ರಕಾರ, ಫ್ಯೂಚರ್ ಸಮೂಹವು ತನ್ನ ಆಸ್ತಿಯನ್ನು ನಿರ್ಬಂಧಿತ ವ್ಯಕ್ತಿಗಳ ಪಟ್ಟಿಯಲ್ಲಿ ಹೇಳಿರುವ ಯಾರೊಬ್ಬರಿಗೂ ಮಾರಾಟ ಮಾಡುವಂತಿಲ್ಲ. ಆ ಪಟ್ಟಿಯಲ್ಲಿ ರಿಲಯನ್ಸ್ ಸಹ ಸೇರಿಕೊಂಡಿದೆ. ಈ ಒಪ್ಪಂದ ನಡೆದಿದ್ದರೂ 2020ರ ಆಗಸ್ಟ್‌ ನಲ್ಲಿ ಫ್ಯೂಚರ್ ರಿಟೇಲ್‍ನ ಸಗಟು ಮತ್ತು ಇತರೆ ವಹಿವಾಟುಗಳನ್ನು ಖರೀದಿಸುವ ಒಪ್ಪಂದ ಮಾಡಿಕೊಂಡಿದೆ. ಇದು 2019ರಲ್ಲಿ ಫ್ಯೂಚರ್ ಮಾಡಿಕೊಂಡಿದ್ದ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಅಮೆಜಾನ್‌ ಹೇಳುತ್ತದೆ.

ಪ್ರಮುಖ ಸುದ್ದಿ :-   ಉದ್ಯಮಿ ಗೋಪಾಲ ಖೇಮ್ಕಾ ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರಿನಲ್ಲಿ ಹತ

 

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement