ಬಸ್ – ಕಾರ್ ಡಿಕ್ಕಿ: ಕಾರಿನಲ್ಲಿದ್ದ ಮೂವರು ಮಹಿಳೆಯರು ಸಾವು

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿಲ್ಲಿದ್ದ ಮೂವರು ಮಹಿಳೆಯರುb ಸಾವಿಗೀಡಾಗಿದ್ದಾರೆ.
ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಹಿಳೆಯರು ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಯಡಿಹಳ್ಳಿ ಗ್ರಾಮದ ನಿವಾಸಿಗಳು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ ಮದುವೆಂದು ಹೋಗುತ್ತಿದ್ದರು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಕುಟುಂಬಸ್ಥರು ಕಾರ್ಯಕ್ರಮಕ್ಕೆಂದು ಹೋಗುತ್ತಿದ್ದರು. ಎದುರಿಗೆ ಬರುತ್ತಿದ್ದ ಸಾರಿಗೆ ಇಲಾಖೆಯ ಬಸ್​ಗೆ ಕಾರು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

0 / 5. 0

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement