ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಐವರು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ದೃಢ, ಇವರಿಗೆ ದೂರದ ಪ್ರವಾಸದ ಇತಿಹಾಸವಿಲ್ಲ..!

ಮಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರ ಹೊಸ ತಳಿ ಓಮಿಕ್ರಾನ್‌ ಮತ್ತಷ್ಟು ಹೆಚ್ಚಳವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಓಮಿಕ್ರಾನ್‌ ಸ್ಪೋಟ ಸಂಭವಿಸಿದ್ದು, ಎರಡು ಕಾಲೇಜುಗಳ ಬರೋಬ್ಬರಿ ಐದು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಾಲೇಜುಗಳಲ್ಲಿನ ಐವರು ವಿದ್ಯಾರ್ಥಿಗಳಲ್ಲಿ ಓಮಿಕ್ರಾನ್‌ ಸೋಂಕು ಪತ್ತೆಯಾಗಿದೆ. ಒಂದು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಹಾಗೂ ಮತ್ತೊಂದು ಕಾಲೇಜಿನ ಒಬ್ಬ ವಿದ್ಯಾರ್ಥಿಗೆ ಓಮಿಕ್ರಾನ್‌ ಸೋಂಕು ದೃಢಪಟ್ಟಿದೆ ಎಂದು ರಾಜ್ಯದ ಆರೋಗ್ಯ ಸಚಿವ ಡಾ.ಸುಧಾಕರ ಟ್ವೀಟ್‌ ಮಾಡಿದ್ದಾರೆ. ಈಗ ರಾಜ್ಯದಲ್ಲಿ ಓಮಿಕ್ರಾನ್‌ ಸೋಂಕಿತ ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್‌ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಾಲೇಜುಗಳ ಪೈಕಿ ಒಟ್ಟು 23 ವಿದ್ಯಾರ್ಥಿಗಳ ಮಾದರಿಯನ್ನು ಓಮಿಕ್ರಾನ್‌ ಟೆಸ್ಟ್‌ಗೆ ಕಳುಹಿಸಲಾಗಿತ್ತು. ಈ ಪೈಕಿ ಬಂಟ್ವಾಳದ ವಸತಿ ಶಾಲೆಯ 14 ವಿದ್ಯಾರ್ಥಿಗಳ ಪೈಕಿ ನಾಲ್ಕು ವಿದ್ಯಾರ್ಥಿಗಳಿಗೆ ಓಮಿಕ್ರಾನ್‌ ದೃಢಪಟ್ಟಿದೆ ಹಾಗೂ ಮಂಗಳೂರಿನ ನರ್ಸಿಂಗ್‌ ಕಾಲೇಜಿನ 19 ವಿದ್ಯಾರ್ಥಿಗಳ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಟೆಸ್ಟ್‌ಗೆ ಕಳುಹಿಸಲಾಗಿದ್ದು, ಈ ಪೈಕಿ ಕೇರಳ ಮೂಲದ ಒಬ್ಬ ವಿದ್ಯಾರ್ಥಿಗೆ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯ ವಿದ್ಯಾರ್ಥಿಗಳಿಗೆ 18 ವರ್ಷ ತುಂಬದ ಹಿನ್ನೆಲೆಯಲ್ಲಿ ಲಸಿಕೆಯನ್ನು ಹಾಕಿಸಿರಲಿಲ್ಲ. ಎಲ್ಲಾ ಓಮಿಕ್ರಾನ್‌ ಸೋಂಕಿತರರು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿಯನ್ನು ನೀಡಿದೆ.ಅವರು ಯಾವುದೇ ವಿದೇಶಗಳಿಗೆ ಅಥವಾ ನೆರೆಯ ಕೇರಳ ರಾಜ್ಯಕ್ಕೆ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ.

ಪ್ರಮುಖ ಸುದ್ದಿ :-   ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement