ಮಹಾರಾಷ್ಟ್ರದಲ್ಲಿ, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ; ಗಡಿಭಾಗದ ವರೆಗೆ ಮಾತ್ರ ಬಸ್ ಸಂಚಾರ

ಸಾಂಗ್ಲಿ/ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಅಂಗಡಿಗಳನ್ನೂ ಧ್ವಂಸಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರ ಹಾಗೂ ಕರ್ನಾಟಕದ ಆಸ್ತಿ ಪಾಸ್ತಿಮೇಲೆ ತಮ್ಮ ಸಿಟ್ಟು ಪ್ರದರ್ಶಿಸುತ್ತಿದ್ದಾರೆ.
ಮೀರಜ್​ನಲ್ಲಿ ಶಿವಸೇನೆ ಕಾರ್ಯರ್ತರು ಬೀದಿಗಿಳಿದು ಕರ್ನಾಟಕ ರಾಜ್ಯದ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕನ್ನಡಿಗರ ಮೇಲೆ ಎಮ್​ಇಎಸ್ ಉದ್ಧಟತನ ಪ್ರದರ್ಶಿಸಿದ್ದು, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ಅಲ್ಲದೆ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ಇರುವ ಕನ್ನಡ ಬೋರ್ಡ್​ಗಳಿಗೆ ಮಸಿ ಬಳಿದಿದ್ದಾರೆ.
ಬೆಳಗಾವಿ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವಾಗಲೇ ಅತ್ತ ಮಹಾರಾಷ್ಟ್ರದಲ್ಲೂ ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುವ ರಾಜ್ಯ ಸಾರಿಗೆ ಸಂಸ್ಥೆ ಬಸ್ಸುಗಳು ಗಡಿಭಾಗದ ವರೆಗೆ ಮಾತ್ರ ಚಲಿಸುತ್ತಿವೆ. ಅತ್ತ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ಸುಗಳು ಸಹ ಅತ್ತಲಿನ ಗಡಿಭಾಗದ ವರೆಗೂ ಮಾತ್ರ ಬಂದು ಹಿಂದಿರುಗುತ್ತಿವೆ. ಪರಿಸ್ಥಿತಿ ಉಲ್ಬಣಗೊಂಡಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಪರಿಸ್ಥಿತಿ ಗಮನಿಸುತ್ತಿದ್ದೇವೆ. ಮತ್ತೆ ಮಾಮೂಲು ಸ್ಥಿತಿಗೆ ಬಂದ ನಂತರ ಎಂದಿನಂತೆ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement