ಇಂದು ನಡೆದ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಚುನಾವಣೆಯಲ್ಲಿ ಕಚ್ಚಾಬಾಂಬ್ ಸ್ಫೋಟಗೊಂಡು ಮೂವರು ಮತದಾರರು ಗಾಯಗೊಂಡಿದ್ದಾರೆ. ಅದರಲ್ಲಿ ಒಬ್ಬರಿಗೆ ತೀವ್ರ ಗಾಯವಾಗಿದ್ದು, ಅವರು ತಮ್ಮ ಕಾಲು ಕಳೆದುಕೊಂಡಿದ್ದಾರೆ.
ಇನ್ನಿಬ್ಬರೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಟಾಕಿ ಶಾಲೆಯ ವಾರ್ಡ್ ನಂಬರ್ 36ರಲ್ಲಿ, ಈ ಘಟನೆ ನಡೆದಿದ್ದು ಬೆಳಗ್ಗೆ 11 ಗಂಟೆಗೆ. ಎರಡು ಬಾಂಬ್ ಸ್ಫೋಟವಾಗಿದೆ. ಇದು ಸಿಸಿಟಿವಿ ಫೂಟೇಜ್ನಲ್ಲಿ ಕಾಣಿಸಿಕೊಂಡಿದೆ. ಘಟನೆ ನಡೆದ ಬೆನ್ನಲ್ಲೇ ಆ ಪ್ರದೇಶದಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಬಾಂಬ್ ಸ್ಫೋಟದ ಸಂಬಂಧ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಚುನಾವಣಾ ಆಯೋಗ ಪೊಲೀಸರಿಗೆ ಸೂಚನೆ ನೀಡಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಮಧ್ಯೆ ಟಿಎಂಸಿ ಗೂಂಡಾಗಳು ಬಿಜೆಪಿ ಅಭ್ಯರ್ಥಿಯೊಬ್ಬರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ನಾಯಕ ಅಮಿತ್ ಮಾಳ್ವಿಯಾ ಟ್ವೀಟ್ ಮಾಡಿದ್ದಾರೆ. ಪೊಲೀಸರಿಗೆ ನೀಡಲಾದ ದೂರಿನ ಪ್ರತಿಯನ್ನು ಶೇರ್ ಮಾಡಿಕೊಂಡಿರುವ ಅಮಿತ್ ಮಾಳ್ವಿಯಾ, ಟಿಎಂಸಿ ಗೂಂಡಾಗಳು ಬಿಜೆಪಿ ನಾಯಕ ಪತ್ನಿಯನ್ನು ರೇಪ್ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ. 8 ವರ್ಷದ ಮಗುವಿನ ಎದುರೇ ಇಂಥ ಬೆದರಿಕೆ ಹಾಕಿದ್ದಾರೆ. ಇಷ್ಟೆಲ್ಲ ಆದರೂ, ಮಮತಾ ಬ್ಯಾನರ್ಜಿಯವರಿಂದ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒಳಪಟ್ಟಿರುವ ಕೋಲ್ಕತ್ತ ಪೊಲೀಸರು ಏನೂ ಮಾಡಿಲ್ಲ ಎಂದು ಅಮಿತ್ ಮಾಳ್ವಿಯಾ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ