ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

ಗುರಗಾಂವ್: ರಾತ್ರಿ ಚಾರ್ಜಿಂಗ್ ಸಮಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡ ನಂತರ ಸೆಕ್ಟರ್ 45 ರಲ್ಲಿ ಅವರ ಕೊಠಡಿಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಮತ್ತು ಅವರ ಕುಟುಂಬದ ನಾಲ್ವರು ಸುಟ್ಟ ಗಾಯಗಳಾಗಿವೆ.
ಸ್ಫೋಟಕ್ಕೆ ಕಾರಣವೇನೆಂಬುದು ಸ್ಪಷ್ಟವಾಗಿಲ್ಲವಾದರೂ, ಕಂಬಳಿಗಳು ಮತ್ತು ಕುಟುಂಬದ ಇತರ ವಸ್ತುಗಳಾದ ಬಟ್ಟೆಗಳು ಮತ್ತು ಟಿವಿ ಸೆಟ್‌ಗಳು ತ್ವರಿತವಾಗಿ ಬೆಂಕಿಯನ್ನು ಹಿಡಿಯಲು ಕಾರಣವಾಯಿತು.
ಗುರುಗ್ರಾಮ್ ಸೆಕ್ಟರ್ 44 ರ ಕನ್ಹೈ ಗ್ರಾಮದಲ್ಲಿ ಗುರುವಾರ ರಾತ್ರಿ ಸುರೇಶ್ ಸಾಹು (60) ಅವರ ಮನೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಚಾರ್ಜ್ ಮಾಡಲು ರೂಮ್ ನಲ್ಲಿ ಚಾರ್ಜ್‌ ಹಾಕಲಾಗಿತ್ತು. ಈ ವೇಳೆ ಅವರ ಮನೆಯ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಿಂದ ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ಮನೆಯ ಸುತ್ತ ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದೆ. ಈ ಪರಿಣಾಮ ಮನೆಯ ಮಾಲೀಕ ಸುರೇಶ್ ಅವರು ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ನೆರೆಹೊರೆಯವರು ಮನೆಯ ಕಿಟಕಿಯನ್ನು ಒಡೆದು ಕೋಣೆಯಲ್ಲಿ ಸಿಲುಕಿಕೊಂಡಿದ್ದ ಕುಟುಂಬದ ಸದಸ್ಯರನ್ನು ರಕ್ಷಿಸಿದ್ದಾರೆ.
ಘಟನೆ ನಡೆದಾಗ ಸುರೇಶ್ ಸಾಹು ಅವರ ಪತ್ನಿ ರೀನಾ(50), ಮಕ್ಕಳಾದ ಮನೋಜ್(25), ಸರೋಜ್(18) ಮತ್ತು ಅನುಜ್ (14) ಅವರ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ಎಲೆಕ್ಟ್ರಿಕ್ ದ್ವಿಚಕ್ರದ ಬ್ಯಾಟರಿಯನ್ನು ಚಾರ್ಜ್ ಮಾಡಲು ಇಡಲಾಗಿದೆ. ಆದರೆ ಅದು ಸ್ಫೋಟಗೊಂಡು ಶೀಘ್ರದಲ್ಲೇ ಅದು ಇಡೀ ಕೋಣೆಗೆ ಹರಡಿದೆ. ಈ ಹಿನ್ನೆಲೆ ಇಡೀ ಕುಟುಂಬ ರೂಮ್ ನಲ್ಲಿ ಸಿಲುಕಿಕೊಂಡಿದ್ದು, ನೆರೆಹೊರೆಯವರು ಅವರನ್ನು ರಕ್ಷಿಸಲು ಕಿಟಕಿಯನ್ನು ಒಡೆದು ಅವರನ್ನು ರಕ್ಷಿಸಿದ್ದಾರೆ.
ಈ ಕುರಿತು ಅವರ ನೆರೆ ಮನೆಯ ರಮೇಶ್ ಕುಮಾರ್ ಮಾತನಾಡಿದ್ದು, ನಾವು ಬಾಗಿಲು ತೆರೆಯಲು ಪ್ರಯತ್ನಿಸಿದೆವು. ಆದರೆ ಅದು ಒಳಗಿನಿಂದ ಲಾಕ್ ಆಗಿತ್ತು. ಕೊಠಡಿಯಲ್ಲಿ ಹೊಗೆ ತುಂಬಿತ್ತು. ಅದಕ್ಕೆ ಅವರ ಮನೆಯ ಕಿಟಕಿಯನ್ನು ಒಡೆದು ಮನೆಯವರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement