ಬೆಂಗಳೂರಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ: ಮೂವರ ಬಂಧನ

ಬೆಂಗಳೂರು: ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಅಲ್ಲದೆ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಶಿವಾಜಿ ಪ್ರತಿಮೆಗೆ ಮಸಿ ಬಳಿದ ಮೂವರು ಆರೋಪಿಗಳನ್ನ ನಿನ್ನೆ ಪೊಲೀಸರು ಬಂಧಿಸಿದ್ದಾರೆ ಎಂದು ಬೊಮ್ಮಾಯಿ ತಿಳಿಸಲಾಗಿದೆ. ಈಗ ಮತ್ತೆ ಮೂವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಘಟನೆ ಖಂಡಿಸಿ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕೆಲ ಎಂಇಎಸ್ ಪ್ರೇರಿತ ಮರಾಠಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬೆಳಗಾವಿ ವಿಧಾನಮಂಡಲದ ಅಧಿವೇಶನಕ್ಕೆ ಆಗಮಿಸಿದ್ದ ಸರಕಾರಿ ವಾಹನಗಳಿಗೆ ಕಲ್ಲು ತೂರಿ ಹಾನಿಗೊಳಿಸಿದ್ದರು. ಅಲ್ಲದೆ ಬೆಳಗಾವಿಯಲ್ಲಿ ಸಂಗೊಳ್ಳಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ
ಭಗ್ನಗೊಳಿಸಲಾಗಿತ್ತು. ಇದನ್ನು ಎಂಇಎಸ್ ಪ್ರೇರಿತ ಮರಾಠಿಗರು ಮಾಡಲಾಗಿರುವ ಶಂಕೆ ವ್ಯಕ್ತವಾಗಿತ್ತು.

5 / 5. 1

ಪ್ರಮುಖ ಸುದ್ದಿ :-   ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement