ಎಸ್​ಡಿಪಿಐ ನಾಯಕನ ಕೊಲೆ ನಡೆದ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ಅಲಪ್ಪುಳ: ಇಂ̧ದು ಭಾನುವಾರ ಮುಂಜಾನೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.
ಕೇರಳದ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ (40 ವರ್ಷದ) ಅವರನ್ನು ಮನೆಯಲ್ಲೇ ಹತ್ಯೆ ಮಾಡಲಾಗಿದೆ. ಇಂದು, ಭಾನುವಾರ ಬೆಳಿಗ್ಗೆ ಮನೆಗೆ ನುಗ್ಗಿದ ಗುಂಪೊಂದು ಬಾಗಿಲು ಬೆಲ್ ಮಾಡಿದೆ. ಮನೆಯ ಬಾಗಿಲು ತೆಗೆದ ಕೂಡಲೇ ಒಳಗೆ ನುಗ್ಗಿದ ದುಷ್ಕರ್ಮಿಗಳು ರಂಜಿತ್ ಶ್ರೀನಿವಾಸ್ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ. ಅಲಪ್ಪುಳದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಅಲಪ್ಪುಳ ಜಿಲ್ಲೆಯಲ್ಲಿ ಅಪರಿಚಿತ ಗ್ಯಾಂಗ್ ದಾಳಿ ಮಾಡಿದ ಒಂದು ದಿನದ ನಂತರ ರಂಜಿತ್ ಶ್ರೀನಿವಾಸನ್ ಅವರ ಸಾವು ಸಂಭವಿಸಿದೆ.ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದರ ತನಿಖೆ ನಡೆಯಬೇಕಿದೆ.
ಶನಿವಾರ ಕೆ.ಎಸ್. ಶಾನ್ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ 12.45ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಎಸ್‌ಡಿಪಿಐ ಅಧ್ಯಕ್ಷ ಕೆ.ಎಸ್.ಶಾನ್ ಅವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಹತ್ಯೆ ಮಾಡಿದ್ದಾರೆ ಎಂದು ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ.ಫೈಝಿ ಆರೋಪಿಸಿದ್ದಾರೆ.
ಅದರ ಬೆನ್ನಲ್ಲೇ ಇಂದು ಮುಂಜಾನೆ ಬಿಜೆಪಿ ನಾಯಕನ ಹತ್ಯೆ ನಡೆದಿರುವುದು ಕೇರಳದಲ್ಲಿ ಆತಂಕ ಹೆಚ್ಚಿಸಿದೆ. ರಂಜಿತ್ ಶ್ರೀನಿವಾಸ್ 2016ರ ವಿಧಾನಸಭಾ ಚುನಾವಣೆಯಲ್ಲಿ ಅಲಪ್ಪುಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ರಂಜಿತ್ ಶ್ರೀನಿವಾಸ್ ವೃತ್ತಿಯಲ್ಲಿ ವಕೀಲರಾಗಿದ್ದರು.

ಪ್ರಮುಖ ಸುದ್ದಿ :-   ಹೈದರಾಬಾದ್ ಮಳೆ: ಗೋಡೆ ಕುಸಿದು 7 ಕಾರ್ಮಿಕರು ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement