ತಿರುವನಂತಪುರ (ಕೇರಳ) : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿರುವ ಹಿನ್ನೆಲೆ ಕೇರಳ ಸರ್ಕಾರ ಶಬರಿಮಲೆ ದೇವಸ್ಥಾನದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದೆ.
ಮಂಡಲ-ಮಕರವಿಳಕ್ಕು (ಮಕರ ಸಂಕ್ರಾಂತಿ) ಉತ್ಸವದಲ್ಲಿ ದೇವಸ್ಥಾನದಲ್ಲಿ ಭಕ್ತರಿಗೆ ತುಪ್ಪದ ಅಭಿಷೇಕಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಿನಂಪ್ರತಿ 60 ಸಾವಿರ ಭಕ್ತರಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದೆ. ಕೋವಿಡ್ ನಿಯಮ ಅನುಸರಿಸಿ ಭಕ್ತರಿಗೆ ಕಾಡಿನ ಮಾರ್ಗದ ಮೂಲಕವೂ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ರವಿವೃದ ವರೆಗೆ 8,11,235 ಭಕ್ತರು ಶಬರಿಮಲೆಗೆ ಬಂದಿದ್ದಾರೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ