ಓಮಿಕ್ರಾನ್ ಹೆಚ್ಚಳದ ಭೀತಿ; ಪಾತಾಳಕ್ಕೆ ಕುಸಿದ ಮುಂಬೈ ಷೇರುಪೇಟೆ, 1,190 ಅಂಕ ಕುಸಿದ ಸೆನ್ಸೆಕ್ಸ್

ಮುಂಬಯಿ: ಬಿಎಸ್‌ಇ ಮತ್ತು ಎನ್‌ಎಸ್‌ಇನಲ್ಲಿನ ಬೆಂಚ್‌ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಸೋಮವಾರ ಶೇಕಡಾ 2 ಕ್ಕಿಂತ ಕಡಿಮೆಯಾಗಿ ಕೊನೆಗೊಂಡಿತು, ಇದು ಜಾಗತಿಕ ಓಮಿಕ್ರಾನ್ ಸೋಂಕುಗಳು ಆರ್ಥಿಕ ಚೇತರಿಕೆಗೆ ಅಪಾಯವನ್ನುಂಟುಮಾಡುವ ಭೀತಿಯಲ್ಲಿ ಕುಸಿತ ಕಂಡಿದೆ.
ವಿಶ್ವಾದ್ಯಂತ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಹಾಗೂ ಆರ್ಥಿಕ ಪರಿಸ್ಥಿತಿಯ ಮೇಲೆ ಆಗಲಿರುವ ಪರಿಣಾಮದ ಭೀತಿಯ ಹಿನ್ನೆಲೆಯಲ್ಲಿ ಸೋಮವಾರ ಷೇರುಪೇಟೆಯ ಸೆನ್ಸೆಕ್ಸ್ ಪಾತಾಳಕ್ಕೆ ಕುಸಿಯುವ ಮೂಲಕ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 1,189.73 ಅಂಕಗಳಷ್ಟು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 55,822.01 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 371 ಅಂಕ ಇಳಿಕೆಯೊಂದಿಗೆ 16,614.20 ಅಂಕಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.
ಬಿಪಿಸಿಎಲ್, ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಇಂಡಸ್ ಇಂಡ್ ಬ್ಯಾಂಕ್, ಎಸ್ ಬಿಐ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಸಿಪ್ಲಾ, ಎಚ್ ಯುಎಲ್ ಮತ್ತು ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಷೇರುಗಳು ಲಾಭಗಳಿಸಿದೆ.
ಇಂದು, ಸೋಮವಾರ ಬೆಳಗ್ಗೆ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಬರೋಬ್ಬರಿ 1,879 ಅಂಕಗಳಷ್ಟು ಕುಸಿತ ಕಂಡಿದ್ದು, ಇದು ಫೆಬ್ರುವರಿ 26ರ ನಂತರ ಒಂದೇ ದಿನದಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ದಾಖಲಿಸಿದಂತಾಗಿದೆ. ಎನ್ ಎಸ್ ಇ ನಿಫ್ಟಿ ಕೂಡಾ 16,450ರ ಮಟ್ಟದಲ್ಲಿದ್ದು, ಮಧ್ಯಂತರ ವಹಿವಾಟಿನ ವೇಳೆ 16,410ಕ್ಕೆ ಕುಸಿದಿತ್ತು.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement