ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಡ್ರೈವರ್- ಅವಳಿ ಮಕ್ಕಳು, ತಾಯಿ ದುರ್ಮರಣ

ಹಾಸನ: ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಅವಳಿ ಮಕ್ಕಳು, ತಾಯಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ತಂದೆ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಮೃತ ಅವಳಿ ಪುಟಾಣಿಗಳನ್ನು ಪ್ರಣತಿ (3) ಹಾಗೂ ಪ್ರಣವ್(3) ಎಂದು ಗುರುತಿಸಲಾಗಿದ್ದು, ತಾಯಿಯನ್ನು ಜ್ಯೋತಿಎಂದು ಗುರುತಿಸಲಾಗಿದೆ.
ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಎರಡು ಪುಟ್ಟ ಮಕ್ಕಳಿದ್ದ ಬೈಕ್‍ಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಮಕ್ಕಳು ಸ್ಥಳದಲ್ಲೇ ಅಸುನೀಗಿದ್ದಾರೆ. ಗಂಭೀರವಾಗಿ ಗಾಐಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಜ್ಯೋತಿ ಕೂಡ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರೂ ಲಾರಿ ಚಕ್ರಕ್ಕೆ ಸಿಲುಕಿ ಸುಮಾರು ಎರಡು ಕಿಲೋಮೀಟರ್​ವರೆಗೆ ಲಾರಿ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಶಿವಾನಂದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಹಾಸನ ಸಂಚಾರ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಲಾರಿ ಚಾಲಕನು ಮದ್ಯಪಾನ ಮಾಡಿ ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಲಾರಿ ವಶಪಡಿಸಿಕೊಂಡ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement