ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ನ್ಯಾಯವಾದಿ ರಾಜೇಶ್ ಕೋರ್ಟಿಗೆ ಶರಣು

ಮಂಗಳೂರು:ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ಸೋಮವಾರ, ಡಿ. 20 ರಂದು ಕೋರ್ಟಿಗೆ ಶರಣಾಗಿದ್ದಾರೆ.
ಇಲ್ಲಿನ 3 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅವರು ಶರಣಾಗಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ವಿದ್ಯಾರ್ಥಿನಿ ಅಕ್ಟೋಬರ್‌18 ರಂದು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ ಬೆನ್ನಿಗೇ ರಾಜೇಶ್ ಅವರು ತಲೆಮರೆಸಿಕೊಂಡಿದ್ದರು. ಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿರಲಿಲ್ಲ. ಎರಡು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು ದೊರೆತಿರಲಿಲ್ಲ. ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿತ್ತು.

 

ನಿಮ್ಮ ಕಾಮೆಂಟ್ ಬರೆಯಿರಿ

advertisement