ಶಾಲೆಗಳಲ್ಲಿ ಮೊಟ್ಟೆ ನೀಡಲು ವಿರೋಧ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸ್ವಾಮೀಜಿಗಳು, ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಕರ್ನಾಟಕದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮೊಟ್ಟೆ ಕೊಡುವ ಯೋಜನೆಯನ್ನ ವಿರೋಧಿಸಿ ಹಾಗೂ ಮುಂದುವರಿಸಿದರೆ ಸಸ್ಯಹಾರಿಗಳಿಗಾಗಿ ಪ್ರತ್ಯೇಕ ಶಾಲೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಸುವರ್ಣಸೌಧದ ವರೆಗೆ ಪಾದಯಾತ್ರೆ ಹಮ್ಮಿಕೊಂಡ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟ ಸ್ವಾಮೀಜಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಶಾಲೆಗಳಲ್ಲಿ ಮೊಟ್ಟೆ ಕೊಡುವುದನ್ನು ವಿರೋಧಿಸಿ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಸಂಚಾಲಕ ದಯಾನಂದ ಸ್ವಾಮೀಜಿ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಕೈಗೊಂಡ ಸ್ವಾಮೀಜಿಗಳು ಹಾಗೂ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಕಾರ್ಯಕರ್ತರನ್ನು ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡರು. ಬಳಿಕ ಸಾರಿಗೆ ಬಸ್​ನಲ್ಲಿ ತುಂಬಿಕೊಂಡು ಪ್ರತಿಭಟನೆ ನಡೆಸಲು ನಿಗದಿಪಡಿಸಿದ ಸ್ಥಳವಾದ ಸುವರ್ಣ ಗಾರ್ಡನ್​ಗೆ ಕರೆದೊಯ್ದರು.
ಇದಕ್ಕೂ ಮುಂಚೆ ಅಖಿಲ ಭಾರತ ಸಸ್ಯಾಹಾರಿ ಒಕ್ಕೂಟದ ಸಂಚಾಲಕ ದಯಾನಂದ ಸ್ವಾಮೀಜಿ ಮಾತನಾಡಿ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರುತ್ತಿರುವ ಮೊಟ್ಟೆ ಯೋಜನೆ ಯಾವುದೇ ಕಾರಣಕ್ಕೂ ಕೈಬಿಡಬೇಕು. ಮೊಟ್ಟೆ ಬದಲಾಗಿ ಆರೋಗ್ಯಕರ ಹಾಗೂ ಪೋಷಕಾಂಶಗಳನ್ನು ಒಳಗೊಂಡ ಸಸ್ಯಾಹಾರಗಳನ್ನು ನೀಡಬೇಕು. ಕಡಲೆ ಬೀಜ, ದ್ವಿದಳ ಧ್ಯಾನ ಹಾಗೂ ಸಿರಿಧ್ಯಾನವನ್ನ ವಿದ್ಯಾರ್ಥಿಗಳಿಗೆ ಕೊಡಬೇಕು. ಒಂದು ವೇಳೆ ಮೊಟ್ಟೆ ಕೊಡಲು ಸರ್ಕಾರ ಮುಂದಾದರೆ ರಾಜ್ಯದಲ್ಲಿ ಪ್ರತ್ಯೇಕ ಸಸ್ಯಾಹಾರಿ ಅಂಗನವಾಡಿ ಹಾಗೂ ಶಾಲೆಗಳನ್ನು ತಕ್ಷಣವೇ ತೆರೆಯಬೇಕು. ನಾವು ಮೊಟ್ಟೆ ಕೊಡುವ ಶಾಲೆಯಲ್ಲಿ ಇರಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement