ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ:ಮೂವರ ಬಂಧನ

ಬೆಳಗಾವಿ :ಅನಗೋಳ ಭಕ್ತ ಕನಕದಾಸ ಕಾಲೊನಿ ಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶುಕ್ರವಾರ ಮಧ್ಯರಾತ್ರಿ ನಂತರ ಅನಗೋಳ ಭಕ್ತ ಕನಕದಾಸ ಕಾಲೊನಿಯಲ್ಲಿ ಇಡಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿಗೊಳಿಸಿ ಭಗ್ನಗೊಳಿಸಲಾಗಿತ್ತು. ಇದನ್ನು ಖಂಡಿಸಿ ರಾಜ್ಯಾದ್ಯಂತ ಸಂಗೊಳ್ಳಿ ರಾಯಣ್ಣ ಭಕ್ತರು ಹಾಗೂ ಕನ್ನಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿದ್ದರು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಬೆಳಗಾವಿಯ ಟಿಳಕವಾಡಿ ಪೊಲೀಸರು ಕೊನೆಗೂ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 5. 1

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

ನಿಮ್ಮ ಕಾಮೆಂಟ್ ಬರೆಯಿರಿ

advertisement