ಬೆಳಗಾವಿ: ಹಲಸಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ, ಬಸವಣ್ಣನಿಗೆ ಕಪ್ಪು ಮಸಿ ಬಳಿದ ಮೂವರು ಆರೋಪಿಗಳ ಬಂಧನ

ಬೆಳಗಾವಿ: ನಗರದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ವಿರೂಪಗೊಳಿಸಿದ ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಕಪ್ಪು ಮಸಿ ಬಳಿದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಬಳಿಕ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟ ಸುಟ್ಟು, ಬಸವಣ್ಣನ ಮೂರ್ತಿಗೆ ಮಸಿ ಬಳಿದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದ ಬಳಿಕ, ಖಾನಾಪುರದ ಹಲಸಿಯ ಗ್ರಾಮ ಪಂಚಾಯತ ಆವರಣದಲ್ಲಿನ ಕನ್ನಡ ಧ್ವಜಕ್ಕೆ ಬೆಂಕಿ ಹಾಗೂ ಬಸವಣ್ಣ ಮೂರ್ತಿಗೆ ಮಸಿ ಬಳಿಯಲಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಡಿದ್ದ ನಂದಗಡ ಪೊಲೀಸರು, ಈಗ ಕೃತ್ಯ ನಡೆಸಿದ ಸಂಜು ಗುರವ್, ಸಚಿನ್ ಗುರವ್ ಹಾಗೂ ಗಣೇಶ್ ಪಡ್ನೇಕರ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement