ಭೀಕರ ಅಪಘಾತ :ಯಲ್ಲಾಪುರದ ಮೂವರ ಸಾವು

posted in: ರಾಜ್ಯ | 0

ಹಿರೇಬಾಗೇವಾಡಿ :ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ವಿರಪನ ಕೊಪ್ಪ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮೂಲದವರು. ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಂದಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ . ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಮೂಲದವರಾದ ಇವರೆಲ್ಲ ಬೆಳಗಾವಿಗೆ ಆಸ್ಪತ್ರೆಗೆಂದು ಬರುತ್ತಿದ್ದರು ಎನ್ನಲಾಗಿದೆ . ವಾಸಿಂ ಖಾನ್ ( 40 ), ಸೈಯದ್ ಇಸ್ಮಾಯಿಲ್ ದಾವುದ್ ( 65 ), ಸುಶೀಲಾ ಫರ್ನಾಂಡಿಸ್ ( 60 ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಾವೇದ್ ( 41 ) ಹಾಗೂ ಮುಕ್ತಿಯಾರ್ ಸಯ್ಯದ್ ( 60 ) ತೀವ್ರ ಗಾಯಗೊಂಡಿದ್ದು ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಅವೈಜ್ಞಾನಿಕ ಮೀಸಲಾತಿ ನಿಗದಿ, ಅಲ್ಪಸಂಖ್ಯಾತರಿಗೆ ವಂಚನೆ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement