ಸಿದ್ದಾಪುರ; ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಶೇಲೂರಿನಲ್ಲಿ ಮಂಗಳವಾರ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದೆ.
ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ಕಳುಹಿಸಲಾಗಿದೆ.
ಶೇಲೂರು ಗ್ರಾಮದ ದತ್ತಾತ್ರೇಯ ನಾಗಾ ನಾಯ್ಕ(೫೫) ಕರಡಿ ದಾಳಿಗೆ ಒಳಗಾದವರಾಗಿದ್ದು ಮಂಗಳವಾರ ಬೆಳಿಗ್ಗೆ ೭ ಗಂಟೆಯ ಸುಮಾರಿಗೆ ತನ್ನ ತೋಟದಲ್ಲಿ ಕೆಲಸ ಮಾಡಿ ಮನೆಗೆ ಮರಳುತ್ತಿದ್ದಾಗ ಕರಡಿ ದಾಳಿ ಮಾಡಿದೆ. ಕರಡಿ ಅವರ ಮೊಣಕಾಲಿಗೆ ಗಂಭೀರ ಗಾಯಮಾಡಿದೆ. ಇವರ ಕೂಗಾಟ ಕೇಳಿದ ಅಕ್ಕ-ಪಕ್ಕ ಕೆಲಸ ಮಾಡುತ್ತಿದ್ದವರು ಬಂದು ಕರಡಿಯನ್ನು ಓಡಿಸಿ ಅರಣ್ಯ ಇಲಾಖೆಯ ವರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ