ಅದ್ಧೂರಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬ್ರೇಕ್ : ಹೊಸ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದ್ಧೂರಿ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದೆ. ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಬಂಧಿಸಿದಂತೆ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಅದ್ಧೂರಿ ನೂತನ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಆಟದ ಮೈದಾನದಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಕ್ರಿಸ್ಮಸ್ ಆಚರಣೆಗೆ ಮಾರ್ಗಸೂಚಿ…

ಚರ್ಚ್ ಆವರಣದದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಗಳು/ಸಾಮೂಹಿಕ ಇತ್ಯಾದಿಗಳನ್ನು ಕೋವಿಡ್ ಮಾರ್ಗಸೂಚಿ ಅನ್ವಯ ನಡೆಸುವುದು.
ಆಚರಣೆ ಅಥವಾ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು, ರಸ್ತೆಗಳು/ಉದ್ಯಾನವನಗಳನ್ನು ಬಳಸುವಂತಿಲ್ಲ

ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳು

* ಕ್ಲಬ್ ಗಳು/ಪಬ್ ಗಳು, ರೆಸ್ಟೋರೆಂಟ್ ಗಳು/ಹೋಟೆಲ್ ಗಳು/ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ / ಆರ್ಕೆಸ್ಟ್ರಾ / ಸಮೂಹ ನೃತ್ಯ ಸೇರಿದಂತೆ ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

*ಹೊಸ ವರ್ಷಾಚರಣೆಗೆ ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸುವಂತಿಲ್ಲ.

* ಸಾಮೂಹಿಕ ನೃತ್ಯ ಹಾಗೂ ಡಿ.ಜೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಇವುಗಳಿಗೆ ನಿರ್ಬಂಧ ವಿಧಿಸಲಾಗಿದೆ.

*ರೆಸ್ಟೊರೆಂಟ್ ಹಾಗೂ ಪಬ್ ಗಳಲ್ಲಿ ಸಿಬ್ಬಂದಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯ

* ರೆಸ್ಟೊರೆಂಟ್ ಹಾಗೂ ಪಬ್ ಗಳಿಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.

* ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ.

ಡಿಸೆಂಬರ್‌ ೩೦ರಿಂದ ಜನೇವರಿ ೨ರ ವರೆಗಗೂ ಈ ನಿಯಮಗಳು ಜಾರಿಯಲ್ಲಿರುತ್ತವೆ.

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement