ನವದೆಹಲಿ: ತಮ್ಮ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮಾಡಿರುವ ಫೋನ್ ಕದ್ದಾಲಿಕೆ ಆರೋಪಗಳನ್ನು ಅವರು ಪ್ರಸ್ತಾಪಿಸಿದರು.
ಮಹಿಳಾ ಸಬಲೀಕರಣಕ್ಕಾಗಿ ಮೀಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಪ್ರಯಾಗ್‍ರಾಜ್ ಭೇಟಿಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ವಿರುದ್ಧವಾಗಿ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ವಿಪಕ್ಷಗಳ ಫೋನ್ ಕದ್ದಾಲಿಕೆಯಲ್ಲಿ ತೊಡಗಿಕೊಂಡಿದೆ. ನನ್ನ ಮಕ್ಕಳ ಇನ್‍ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಿದೆ ಎಂದು ಆರೋಪಿಸಿದ್ದಾರೆ.
ಪ್ರಯಾಗ್ ರಾಜ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಪ್ರಿಯಾಂಕಾ ಗಾಂಧಿ, ನಾನೊಬ್ಬಳು ಹುಡುಗಿಯಾಗಿ ಜನಿಸಿದ್ದೇನೆ. ನಾನು ಹೋರಾಟವನ್ನೂ ಮಾಡಬಲ್ಲೆ. ದೇಶದ ಶಕ್ತಿಯಾಗಿರುವ ಮಹಿಳೆಯರ ಎದುರು ಪ್ರಧಾನಿ ತಲೆ ಬಾಗಿದ್ದಾರೆ. ಇದು ಉತ್ತರ ಪ್ರದೇಶದ ಮಹಿಳೆಯರಿಗೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ