ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು ಅದಕ್ಕೇ ಆದ್ಯತೆ ನೀಡಬೇಕಿದೆ: ಗೋವಿಂದಾಚಾರ್ಯ

ಯಾದಗಿರಿ: ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು.
ಲಕ್ಷೀ ನಗರದ ಶ್ರೀ ಲಕ್ಷೀ ಮಾರುತಿ ದೇವಸ್ಥಾನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು, ಅದರಂತೆ ನಾವು ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಆದರೆ ಸರಕಾರಗಳು ಉದ್ದಿಮೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ ಎಂದರು.
ಬ್ರಿಟೀಷರು ಹಾಕಿಕೊಟ್ಟ ದಾರಿಯಲ್ಲಿ ಕಳೆದ ೬೦ ವರ್ಷದಿಂದ ಸರಕಾರಗಳು ಆಡಳಿತ ನಡೆಸುತ್ತಿವೆ. ಇದರಿಂದ ಭಾರತದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದ ಅವರು, ಭಾರತದ ಸಂಪನ್ಮೂಲ ಭರಿತ ದೇಶವಾಗಿದ್ದು, ಇಲ್ಲಿಯ ಪ್ರಕೃತಿಗೆ ಆಧರಿಸಿ ಕೃಷಿಗೆ ಹೆಚ್ಚು ಒತ್ತು ನೀಡಬೇಕು. ಇನ್ನೂ ಸರಕಾರಗಳು ಆಡಳಿತದಲ್ಲಿ ನಮ್ಮತನ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಚಿಂತನಾ ಕಾರ್ಯಕ್ರಮವನ್ನು ಗುರುಮಿಠಕಲ್ ಖಾಸಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಮಾಜಿ ಶಾಸಕ ಡಾ. ವೀರಬಸವಂತರೆಡ್ಡಿ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ, ಹಿರಿಯ ನ್ಯಾಯವಾದಿ ಎಸ್.ಬಿ. ಪಾಟೀಲ್, ಅಖಿಲ ಭಾರತೀಯ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಎನ್ ಮಣ್ಣೂರ, ನಗರಸಭೆ ಮಾಜಿ ಅಧ್ಯಕ್ಷೆ ಲಲಿತಾ ಅನಪುರ ಹಾಜರಿದ್ದರು.
ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ನೀಲಕಂಠರಾಯ ಯಲ್ಹೇರಿ ನಿರೂಪಿಸಿ, ವಂದಿಸಿದರು. ಪುಟ್ಟರಾಜ ಸಂಗೀತ ಶಾಲೆಯ ಮಕ್ಕಳು ಪ್ರಾರ್ಥಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement