ಬೆಳಗಾವಿ : ಈ ಬಾರಿಯ ಹೊಸವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ.
ಹೊಸವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು.
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ತಿಳಿಸಿದ್ದಾರೆ.
ಹೊಸವರ್ಷದ ಸಂಭ್ರಮಾಚರಣೆಗೆ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಬಹಿರಂಗ ಪಾರ್ಟಿಗಳಿಗೆ ಅವಕಾಶ ಇಲ್ಲ. ಚರ್ಚ್ ಒಳಗೆ ಪ್ರಾರ್ಥನೆ ಮಾಡುವುದ್ದಕ್ಕೆ ಯಾವುದೇ ತೊಂದರೆ ಇಲ್ಲ, ಸಾಮಾಜಿಕ ಅಂತರ ಪಾಲಿಸಬೇಕು ಎಂದರು.
ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರ ವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಭೆ ಮಾಡಿದ ಪ್ರಮುಖವಾದ ಉದ್ದೇಶ ಓಮಿಕ್ರಾನ್ ಮತ್ತು ಕೋವಿಡ್ ತಡೆಗಟ್ಟುವುದಾಗಿದೆ. ತಜ್ಞರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿ, ಕೆಲವು ಕ್ರಮಗಳ ಕುರಿತು ಶಿಫಾರಸ್ಸು ಮಾಡಿದ್ದಾರೆ. ಎಂಜಿ ರೋಡ್, ಬ್ರಿಗೇಡ್ ರೋಡ್ ನಲ್ಲಿ ಬಹಿರಂಗ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಲಾಗಿದೆ. ಕ್ಲಬ್ ಗಳು, ರೆಸ್ಟೋರೆಂಟ್ ಗಳಲ್ಲಿ ವಿಶೇಷ ಇವೆಂಟ್ ಮಾಡುವ ಹಾಗೆ ಇಲ್ಲ. ಕ್ಲಬ್ ಗಳಲ್ಲಿ ಸಾಮರ್ಥ್ಯದ 50 % ಗೆ ಮಾತ್ರ ಅವಕಾಶ ಇದೆ. ಅಪಾರ್ಟ್ಮೆಂಟ್ ಗಳಲ್ಲೂ ಬಹಿರಂಗ ಆಚರಣೆಗೆ ಅವಕಾಶ ಇಲ್ಲ. ಎಲ್ಲಾ ಕ್ರಮಗಳನ್ನು ಅಪಾರ್ಟ್ಮೆಂಟ್ ಅಸೋಸಿಯೇಷನ್ ನವರೇ ಮಾಡಬೇಕು. ರಾಜ್ಯಾದ್ಯಂತ ಡಿ. 30 ರಿಂದ 2 ನೇ ಜನವರಿಗೆ ಮಾರ್ಗಸೂಚಿಗಳು ಅನ್ವಯವಾಗಲಿದೆ ಎಂದರು.
ಕ್ಲಬ್ ಗಳಲ್ಲಿ ಸಿಬ್ಬಂದಿಗೆ ಆರ್ ಟಿ-ಪಿಸಿಆರ್ ಟೆಸ್ಟ್ ಕಡ್ಡಾಯ, ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿರಬೇಕು ಎಂದರು.
*ಹೊಸ ವರ್ಷ ಆಚರಣೆಯಲ್ಲಿ ಡಿಜೆಗೆ ಅವಕಾಶ ಇಲ್ಲ
*ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ರಾಜ್ಯಾದ್ಯಂತ ಯಾವುದೇ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶ ಇಲ್ಲ
*ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಶೇ.50ರಷ್ಟು ಜನರಿಗೆ ಅವಕಾಶ
*ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಕಡ್ಡಾಯ
*ಡಿ.30 – ಜನವರಿ 2ರ ತನಕ ಹೊಸ ಮಾರ್ಗಸೂಚಿ ಅನ್ವಯ
*ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿಷೇಧ ಇಲ್ಲ
ನಿಮ್ಮ ಕಾಮೆಂಟ್ ಬರೆಯಿರಿ