ಡ್ರಾಯಿಂಗ್ ಗ್ರೇಡ್’ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಆನ್‌ಲೈನ್‌ ಅರ್ಜಿ ಆಹ್ವಾನ

ಬೆಂಗಳೂರು : 2022ರ ಜನವರಿ ತಿಂಗಳಿನಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಇತರೆ ಪರೀಕ್ಷೆಗಳ ವಿಭಾಗದಿಂದ ಜನವರಿ ತಿಂಗಳಿನಲ್ಲಿ ನಡೆಯುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಸಗಿ ಅಭ್ಯರ್ಥಿಗಳು ಕೂಡ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದ್ದು,ಅರ್ಹ ಅಭ್ಯರ್ಥಿಗಳ ವಿವರಗಳನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು https://sslc.karnataka.gov.in/ ಜಾಲತಾಣದಲ್ಲಿ ಅಪ್ ಲೋಡ್ ಮಾಡಲು ಸೂಚಿಸಲಾಗಿದೆ.
ಡ್ರಾಯಿಂಗ್ ಗ್ರೇಡ್ ಪರೀಕ್ಷೆ ತೆಗೆದುಕೊಳ್ಳಲು ರೆಗ್ಯೂಲರ್ ಹಾಗೂ ಖಾಸಗಿ ಅಭ್ಯರ್ಥಿಗಳು 7ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಪ್ರಸ್ತುತ 8,9,10, ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜಿಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್‌ಎಟಿಎಸ್‌ (SATS) ಸಂಖ್ಯೆ ಹೊಂದಿರುವ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಹಾಗೆಯೇ ಖಾಸಗಿ ಅಭ್ಯರ್ಥಿಗಳಿಗೂ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ.
ಪರೀಕ್ಷೆಗೆ ಮಂಡಳಿಯಿಂದ ಅನುಮೋದಿಸಲ್ಪಟ್ಟ ಪರೀಕ್ಷಾ ಕೇಂದ್ರಗಳ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನೊಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ಇತರೆ ಪರೀಕ್ಷೆಯ ನಿರ್ದೇಶಕರಾದ ಎಸ್ . ಗೀತಾ ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಸುತ್ತೋಲೆ ನೋಡಬಹುದಾಗಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement