ಧಗಧಗನೆ ಹೊತ್ತಿ ಉರಿದ ಶಾಲಾ ಬಸ್

ಮೈಸೂರು: ಶಾಲಾ ಬಸ್ ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ.
ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್‌ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ‌ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬೆಂಕಿ ತಗಲುತ್ತಿದ್ದಂತೆ ಅಕ್ಕ ಪಕ್ಕ ನಿಲ್ಲಿಸಿದ್ದ ಬಸ್ಸುಗಳನ್ನು ಅಲ್ಲಿಂದ ತೆರವು ಮಾಡಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

1 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement