ಭಾರೀ ದುಬಾರಿ ವಿಚ್ಛೇದನ: ದುಬೈ ದೊರೆಯಿಂದ ಆರನೇ ಪತ್ನಿಗೆ 5,527 ಕೋಟಿ ರೂ. ಜೀವನಾಂಶ!

ಲಂಡನ್: ದುಬೈ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್(72) ಅವರು ತಮ್ಮ ಆರನೇ ಹೆಂಡತಿ ಹಯಾ ಬಿಂಟ್‌ ಅಲ್ ಹುಸೇನ್(47) ಅವರಿಗೆ ವಿಚ್ಛೇದನ ನೀಡಿದ್ದು, ಬ್ರಿಟನ್ ಹೈಕೋರ್ಟ್ ಅವರ ಅರ್ಜಿಯನ್ನು ಇತ್ಯರ್ಥಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ಹಾಗೂ ದುಬೈ ದೊರೆ ತಮ್ಮ ವಿಚ್ಛೇದಿತ ಪತ್ನಿಗೆ 5,527 ಕೋಟಿ ರೂ.ಗಳಷ್ಟು ಜೀವನಾಂಶ ಕೊಡಬೇಕು ಎಂದು ತೀರ್ಪು ನೀಡಿದೆ.
ಇದರಲ್ಲಿ 2,521 ಕೋಟಿ ರೂ.ಗಳನ್ನು ಪೂರ್ಣವಾಗಿ ಒಂದು ಮೊತ್ತದಲ್ಲಿ ಹಯಾಗೆ ಪಾವತಿಸಬೇಕು ಎಂದು ಹೇಳಿದೆ. ರಶೀದ್ ಅವರ ಪತ್ನಿಯರ ಪೈಕಿ ಹಯಾ ಕಿರಿಯವರಾಗಿದ್ದು, ದಂಪತಿಗೆ ಅಲ್ ಜಲಿಲಿಯಾ(14) ಜಯದ್(9) ಎಂಬ ಇಬ್ಬರು ಮಕ್ಕಳಿದ್ದಾರೆ.
ಈ ಎರಡು ಮಕ್ಕಳ ಶಿಕ್ಷಣಕ್ಕಾಗಿ 96 ಕೋಟಿ ರೂ., ಹಾಗೂ ಜವಾಬ್ದಾರಿ ನಿಭಾಯಿಸಲು 112 ಕೋಟಿ ರೂ. ವಾರ್ಷಿಕವಾಗಿ ನೀಡಬೇಕಿದ್ದು, ಇತರೆ ಅಗತ್ಯತೆಗಳಿಗೆ 2,907 ಕೋಟಿ ರೂ.ಗಳನ್ನು ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. ಇತರೆ ಅಗತ್ಯತೆಗಳಿಗೆ 2,907 ಕೋಟಿ ರೂ.ಗಳನ್ನು ಬ್ಯಾಂಕ್ ಗ್ಯಾರಂಟಿಯಾಗಿ ನೀಡಬೇಕಾಗುತ್ತದೆ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರಿಟನ್ ಇತಿಹಾಸದಲ್ಲಿ ಇದು ಅತ್ಯಂತ ದುಬಾರಿ ವಿಚ್ಛೇದನ ಎಂದು ಹೇಳಲಾಗಿದೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement