19 ಲಕ್ಷ ಮಂದಿ ಇ-ಕ್ರಮ ಪೋರ್ಟಲ್ ವ್ಯಾಪ್ತಿಗೆ : ಸಚಿವ ಹೆಬ್ಬಾರ

ಬೆಳಗಾವಿ: ಇ-ಕ್ರಮ ಪೋರ್ಟಲ್ ವ್ಯಾಪ್ತಿಗೆ 19 ಲಕ್ಷ ಜನರನ್ನು ತರಲಾಗಿದೆ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವರ್ಷದ ಒಟ್ಟು ಉತ್ಪನ್ನದಲ್ಲಿ ಶೇ.10ರಷ್ಟನ್ನು ಕಾರ್ಮಿಕರ ಕಲ್ಯಾಣಕ್ಕೆ ನೀಡಬಹುದಾಗಿದೆ ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯಲ್ಲಿ ಎಲ್ಲ ಕಾರ್ಮಿಕರನ್ನು ನೋಂದಣಿ ಮಾಡುವ ವ್ಯವಸ್ಥೆ ಇಲ್ಲ. ಆದರೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 26,73,298 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೋಂದಣಿಯಾಗಿದ್ದಾರೆ . ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ 8,40,561 ಕಾರ್ಮಿಕರು ನೋಂದಾಯಿತರಾಗಿದ್ದಾರೆ ಎಂದು ತಿಳಿಸಿದರು.
ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ, ಕಾರ್ಮಿಕರಿಗೆ ವೈದ್ಯಕೀಯ ನೆರವು, ಅಪಘಾತ ಧನ ಸಹಾಯ ಮೊದಲಾದ ಸಹಾಯಗಳನ್ನು ಒದಗಿಸಲಾಗುತ್ತಿದೆ. ಕೋವಿಡ್ 2ನೇ ಅಲೆಯ ವಿಶೇಷ ಪ್ಯಾಕೇಜ್‍ನಡಿ 11,82,307 ಅರ್ಹ ಅರ್ಜಿದಾರರಿಗೆ ತಲಾ 2000ದಂತೆ 236.46 ಕೋಟಿ ರೂ. ಪರಿಹಾರವನ್ನು ಮಂಡಳಿ ಮೂಲಕ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement