ತೆಲಂಗಾಣದಲ್ಲಿ ಕೊರೆಯುವ ಚಳಿ, ಕೇವಲ 3.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು…! 125 ವರ್ಷಗಳಲ್ಲಿ 2ನೇ ಬಾರಿಗೆ ಅತಿ ಕಡಿಮೆ ತಾಪಮಾನ

ಹೈದರಾಬಾದ್​ (ತೆಲಂಗಾಣ): 125 ವರ್ಷಗಳ ಕಾಲಾವಧಿಯಲ್ಲಿ ತೆಲಂಗಾಣ ರಾಜ್ಯದಲ್ಲಿ ಎರಡನೇ ಬಾರಿಗೆ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ಕುಮುರಂ ಭೀಮ್ ಜಿಲ್ಲೆಯ ಗಿನ್ನೆಧಾರಿ ಪ್ರದೇಶದಲ್ಲಿ ಮಂಗಳವಾರ ಕೇವಲ 3.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, 1897ರ ನಂತರ ಎರಡನೇ ಬಾರಿಗೆ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ ಎಂದು ವರದಿಗಳು ತಿಳಿಸಿವೆ.
1897 ರ ಡಿಸೆಂಬರ್ 17 ರಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ 4.4 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿತ್ತು. ಆ ಬಳಿಕ 2017ರ ಡಿಸೆಂಬರ್​ 27ರಂದು ಆದಿಲಾಬಾದ್‌ನಲ್ಲಿ 3.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಆ ಬಳಿಕ ಇದೀಗ 2021ರ ಡಿಸೆಂಬರ್​ 21ರಂದು 3.5 ಡಿಗ್ರಿ ಸೆಲ್ಸಿಯಸ್ ತಾಪಮಾನಕ್ಕೆ ಕುಮುರಂ ಭೀಮ್ ಜಿಲ್ಲೆ ಸಾಕ್ಷಿಯಾಗಿದೆ.
ಮಂಗಳವಾದ ಆದಿಲಾಬಾದ್ ಜಿಲ್ಲೆಯಲ್ಲಿ ಕೂಡ 4 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆ ತಾಪಮಾನ ದಾಖಲಾಗಿದೆ, ರಂಗಾರೆಡ್ಡಿಯಲ್ಲಿ 8.4 ಡಿಗ್ರಿ ಮತ್ತು ಹೈದರಾಬಾದ್​ನ ಇತರ ಕೆಲ ಜಿಲ್ಲೆಗಳಲ್ಲಿ 9.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕುಸಿದು, ಚಳಿ ಮತ್ತು ಶೀತಗಾಳಿ ಹೆಚ್ಚಳವಾಗಲಿದೆ. ಈ ತಿಂಗಳ 27 ರ ವರೆಗೆ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ...!

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement