ಓಮಿಕ್ರಾನ್ ಭೀತಿ: ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿ

ನವದೆಹಲಿ​​: ದೇಶಾದ್ಯಂತ ಓಮಿಕ್ರಾನ್​ ಭೀತಿ ಹೆಚ್ಚಾಗಿದ್ದು, ಈಗಾಗಲೇ ಬಹುತೇಕ ಎಲ್ಲ ರಾಜ್ಯಗಳಲ್ಲೂ ಹೊಸ ಸೋಂಕು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ಹೆಚ್ಚಿನ ವೈರಾಣು ಪ್ರಕರಣ ಕಾಣಿಸಿಕೊಳ್ಳಲು ಶುರುವಾಗಿರುವ ಕಾರಣ ಹೊಸ ಹೊಸ ಮಾರ್ಗಸೂಚಿ ಜಾರಿಗೊಳ್ಳುತ್ತಿವೆ.
ಹರಿಯಾಣದಲ್ಲಿ ಓಮಿಕ್ರಾನ್​​​ ಸೋಂಕು ಹೆಚ್ಚಾಗಿರುವ ಕಾರಣ ಶುಕ್ರವಾರದಿಂದ ನೈಟ್ ಕರ್ಫ್ಯೂ ಜಾರಿಗೊಳ್ಳುತ್ತಿದ್ದು, ರಾತ್ರಿ 11ರಿಂದ ಬೆಳಗ್ಗೆ 5 ಗಂಟೆಯ ವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಇದರ ಜೊತೆಗೆ ಸಾರ್ವಜನಿಕ ಸಮಾರಂಭಗಳಲ್ಲಿ 200ಕ್ಕೂ ಅಧಿಕ ಜನರು ಒಟ್ಟಿಗೆ ಸೇರದಂತೆ ಸೂಚನೆ ನೀಡಲಾಗಿದೆ.
ಉತ್ತರ ಪ್ರದೇಶದಲ್ಲೂ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 11ರಿಂದ ಬೆಳಗ್ಗೆ 5 ಗಂಟೆವರೆಗೆ ನಿಯಮ ಜಾರಿಯಲ್ಲಿರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ 200 ಜನರು ಸೇರಲು ಮಾತ್ರ ಅವಕಾಶ ನೀಡಲಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.
ಮಹಾರಾಷ್ಟ್ರದಲ್ಲೂ ರಾತ್ರಿ 9ರಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದ್ದು, ರಾತ್ರಿ ವೇಳೆ 5ಕ್ಕಿಂತಲೂ ಹೆಚ್ಚಿನ ಜನರು ಗುಂಪುಗಳಾಗಿ ಹೋಗುವುದರ ಮೇಲೆ ನಿಷೇಧ ಹೇರಿದೆ. ಒಳಾಂಗಣ ಜಿಮ್​, ಸ್ಪಾ, ಹೋಟೆಲ್​, ಥಿಯೇಟರ್​ ಮತ್ತು ಸಿನಿಮಾ ಹಾಲ್​ಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಇದರ ಜೊತೆಗೆ ದುಬೈನಿಂದ ಬರುವ ಎಲ್ಲರಿಗೂ ಏಳು ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement