ಓಮಿಕ್ರಾನ್ : ನೈಟ್ ಕರ್ಫ್ಯೂ ಕುರಿತು ನಾಳಿನ ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ..?

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ರವಿವಾರ ಬೆಂಗಳೂರಿನಲ್ಲಿ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಓಮಿಕ್ರಾನ್ ವಿಚಾರದಲ್ಲಿ ನಮಗೆ ಮಹಾರಾಷ್ಟ್ರ, ಕೇರಳದಿಂದ ಹೆಚ್ಚು ಆತಂತವಿತ್ತು. ಇದೀಗ ತಮಿಳುನಾಡಿನಲ್ಲಿಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಕ್ರಮ, ಹೊಸ ವರ್ಷಾಚರಣೆ ಬಗ್ಗೆಯೂ ಚರ್ಚಿಸಲಾಗುವುದು ಎಂದರು.
ವಿಧಾನ ಪರಿಷತ್ತುನಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ವಿಚಾರದಲ್ಲಿ ಸರಕಾರಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಮೇಲ್ಮನೆಯಲ್ಲಿ ನಮಗೆ ಬೆಂಬಲ ಇಲ್ಲ. ಜತೆಗೆ 3-4 ಜನ ನಮ್ಮ ಪಕ್ಷದ ಸದಸ್ಯರು ಇರಲಿಲ್ಲ. ಇನ್ನು ಇಬ್ಬರು ಸದಸ್ಯರು ಬಂದಿದ್ದರೂ ಮಂಡನೆ ಮಾಡುತ್ತಿದ್ದೆವು ಎಂದು ತಿಳಿಸಿದರು.
ಭಾನುವಾರದ ಸಭೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ನೈಟ್ ಕರ್ಫ್ಯೂ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಈವರೆಗೆ 31 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಕಾರ್ನಾಟಕ 7ನೇ ಸ್ಥಾನದಲ್ಲಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement