ಕೃಷಿ ಕಾಯ್ದೆಗಳನ್ನು ಮರಳಿ ತರುವುದಿಲ್ಲ: ವಿವಾದದ ಬಳಿಕ ಕೇಂದ್ರ ಕೃಷಿ ಸಚಿವರ ಸ್ಪಷ್ಟನೆ

ಗ್ವಾಲಿಯರ್: ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ. ತಿದ್ದುಪಡಿ ಮಾಡಲಾದ ರೀತಿಯಲ್ಲಿ ಮತ್ತೆ ಜಾರಿಗೆ ತರುವುದಿಲ್ಲ ಎಂದು ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ, ರದ್ದುಗೊಳಿಸಲಾದ ಮೂರು ಕೃಷಿ ಕಾಯ್ದೆಗಳನ್ನು ಮರಳಿ ತರಲು ಕೇಂದ್ರ ಸರ್ಕಾರ ಯೋಚನೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅದರ ಬೆನ್ನಲ್ಲೇ ಕೇಂದ್ರ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ಕೃಷಿ ಪ್ರದರ್ಶನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ತೋಮರ್ ಅವರು, ಕೃಷಿ ಕಾಯ್ದೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಹೆಜ್ಜೆ ಹಿಂದೆ ಇರಿಸಿದೆ. ಆದರೆ ಮತ್ತೊಮ್ಮೆ ಮುಂದೆ ಸಾಗಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಬಗ್ಗೆ ಈಗ ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರವು ಉತ್ತಮ ಕೃಷಿ ಕಾಯ್ದೆಗಳನ್ನು ರೂಪಿಸಿತ್ತು. ಕೆಲವು ಕಾರಣಗಳಿಂದ ನಾವು ಅದನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಆಗಿದೆ. ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಸರ್ಕಾರ ಮುಂದುವರಿಸಲಿದೆ ಎಂದು ನಾನು ಹೇಳಿದ್ದೆ’ ಎಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement