ನಕಲಿ’ ಎನ್‌ಸಿಬಿ ಅಧಿಕಾರಿಗಳು 20 ಲಕ್ಷ ರೂ.ಗೆ ಬೇಡಿಕೆಯಿಟ್ಟ ನಂತರ ನಟಿ ಆತ್ಮಹತ್ಯೆ : ಪೊಲೀಸರು

ಮುಂಬೈ: ಮುಂಬೈನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳಂತೆ ನಟಿಸಿದ ವ್ಯಕ್ತಿಗಳು ಕಿರುಕುಳ ನೀಡಿದ್ದರಿಂದ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ನಕಲಿ’ ಎನ್‌ಸಿಬಿ ಅಧಿಕಾರಿಗಳು ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ ನಂತರ 28 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ಬರು ನಕಲಿ ಎನ್‌ಸಿಬಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

40 ಲಕ್ಷ ರೂ.ಗೆ ಬೇಡಿಕೆ ಇಡಲಾಗಿತ್ತು
ಪೊಲೀಸ್ ಅಧಿಕಾರಿಯೊಬ್ಬರು, ”ನಟಿಗೆ ಆರೋಪಿಗಳು ನಕಲಿ ಎನ್‌ಸಿಬಿ ಅಧಿಕಾರಿಗಳಂತೆ ಬಿಂಬಿಸಿ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾವು ಸೂರಜ್ ಪರ್ದೇಸಿ ಮತ್ತು ಪ್ರವೀಣ್ ವಲಿಂಬೆಯನ್ನು ಬಂಧಿಸಿದ್ದೇವೆ. ಆರೋಪಿಗಳು ಆರಂಭದಲ್ಲಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ನಂತರ ಅದನ್ನು 20 ಲಕ್ಷ ರೂ.ಗಳಿಗೆ ಇಳಿಸಲಾಯಿತು.
ನಾವು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದೇವೆ. ಕಲಂ 306, 170, 420, 384, 388, 389, 506 ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಬಂಧನಗಳು ಸಾಧ್ಯ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಲಯ 9 ರ ಡಿಸಿಪಿ ಮಂಜುನಾಥ ಸಿಂಘೆ ತಿಳಿಸಿದ್ದಾರೆ.
ಡಿಸೆಂಬರ್ 20 ರಂದು, ನಟಿ ಇಬ್ಬರು ಸ್ನೇಹಿತರೊಂದಿಗೆ ಮುಂಬೈನ ಹುಕ್ಕಾ ಪಾರ್ಲರ್‌ನಲ್ಲಿದ್ದಾಗ ನಕಲಿ ಎನ್‌ಸಿಬಿ ಅಧಿಕಾರಿಗಳು ಅವರನ್ನು ಸಂಪರ್ಕಿಸಿದರು.ಈ ವೇಳೆ ನಟಿಯ ಜೊತೆಯಲ್ಲಿದ್ದ ಇಬ್ಬರು ಸ್ನೇಹಿತರು ಕೂಡ ಆರೋಪಿಗಳೊಂದಿಗೆ ಶಾಮೀಲಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ನಂತರ, ನಟಿ ಖಿನ್ನತೆಗೆ ಒಳಗಾಗಿದ್ದರು. ಡಿಸೆಂಬರ್ 23 ರಂದು ಮುಂಬೈನ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡರು.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement