ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶ, ಏನಿರತ್ತೆ..ಏನಿರಲ್ಲ..? ಮಾಹಿತಿ ಇಲ್ಲಿದೆ

ಬೆಂಗಳೂರು: ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಎಂದು ಭಾವಿಸಿದವರಿಗೆ ಸರ್ಕಾರ ಶಾಕ್ ನೀಡಿದೆ.
ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಹಾಗೂ  ಆ ಸಮಯದಲ್ಲಿ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ, ಸಿನಿಮಾ ಥಿಯೇಟರ್​ಗಳಿಗೆ ಸದ್ಯ ಈ ನಿಮಯ ಅನ್ವಯವಾಗುವುದಿಲ್. ಆದರೆ ನೈಟ್ ಕರ್ಫ್ಯೂ ವೇಳೆ ಸಿನಿಮಾ ಬಂದ್ ಇರಲಿದೆ, ಮುಂದಿನ 10 ದಿನ ಪರಿಸ್ಥಿತಿ ‌ನೋಡಿಕೊಂಡು ಸಿಎಂ ತೀರ್ಮಾನ ಮಾಡುವರು  ಎಂದು  ತಿಳಿಸಿದರು.
ಮುಖ್ಯಮಂತ್ರಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ.
ಲಸಿಕೆಯ ವಿಚಾರವಾಗಿ ಹೇಳುವುದಾದರೆ ಮೊದಲ ಡೋಸ್‌ ಅನ್ನು ಶೇ. 97 ರಷ್ಟು ನೀಡಲಾಗಿದೆ. ಅದು ಶೇ. 100 ರಷ್ಟು ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. 2ನೇ ಡೋಸ್‌ ಅನ್ನು ಶೇ. 75 ರಷ್ಟು ಮಂದಿಗೆ ನೀಡಲಾಗಿದೆ. ಇನ್ನೂ 45 ಲಕ್ಷ ಮಂದಿ 2ನೇ ಡೋಸ್‌ ತೆಗೆದುಕೊಳ್ಳುವವರಿದ್ದಾರೆ. ಓಮಿಕ್ರಾನ್‌ ಅತ್ಯಂತ ವೇಗದಲ್ಲಿ ಹರಡುತ್ತಿದೆ.ಓಮಿಕ್ರಾನ್ ಯಾವ ರೀತಿಯಲ್ಲಿ ಹರಡಿದೆ ಎಂದು ಬೇರೆ ದೇಶ ಮತ್ತು ರಾಜ್ಯಗಳ ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿ ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ  ಹೀಗಾಗಿ ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
4 ಸಾವಿರ ಐಸಿಯು ಬೆಡ್ ಸಿದ್ಧಪಡಿಸಿಕೊಂಡಿದ್ದೇವೆ. 7,500 ಬೆಡ್‌ಗಳು ಐಸಿಯು ಬೆಡ್‌ಗಳಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ.. ಜನವರಿ 10ರಿಂದ ರಾಜ್ಯಾದ್ಯಂತ ಬೂಸ್ಟರ್ ಡೋಸ್ ನೀಡಲಾಗುವುದು. ಆಯಾ ಕ್ಷೇತ್ರಗಳಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಸುಧಾಕರ್, ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರದಿಂದ ಗೈಡ್‌ಲೈನ್ಸ್ ಬಂದ ಬಳಿಕ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.
ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕ್ಕಷ್ಟೆ ರಾತ್ರಿ 10 ಗಂಟೆ ನಂತರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎಂ.ಕೆ.ಸುದರ್ಶನ್, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement