ಚಂಡೀಗಢ ಮುನ್ಸಿಪಲ್ ಚುನಾವಣೆ: ಮೊದಲ ಪ್ರಯತ್ನದಲ್ಲೇ 14 ಸೀಟು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆಮ್‌ ಆದ್ಮಿ ಪಕ್ಷ

ಚಂಡೀಗಢ: ಪಂಜಾಬ್‌ ವಿಧಾನಸಭೆ ಚುನಾವಣೆಗೂ ಮುನ್ನ ಆಮ್‌ ಆದ್ಮಿ ಪಾರ್ಟಿ ಬಹುದೊಡ್ಡ ಗೆಲುವು ಸಾಧಿಸಿದೆ. ಆಮ್‌ ಆದ್ಮಿ ಪಕ್ಷವು ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದು, 14 ಸ್ಥಾನಗಳಲ್ಲಿ ಗೆಲ್ಲುವ ಮೂಲಕ 35 ವಾರ್ಡುಗಳ ಫಲಿತಾಂಶದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
1996 ರಿಂದ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ತಲಾ 12 ವರ್ಷಗಳ ಕಾಲ ಆಡಳಿತ ನಡೆಸಿವೆ. ಈಗ ಜನರು ಎಎಪಿಗೆ ಅವಕಾಶ ನೀಡಿದ್ದಾರೆ ಎಂದು ಎಎಪಿ ಶಾಸಕ ರಾಘವ ಚಡ್ಡಾ ಹೇಳಿದ್ದಾರೆ.
ಚಂಡೀಗಢ ಟ್ರೈಲರ್ ಎಂದು ಹೇಳಬಹುದು. ಪಂಜಾಬ್ ಮೇ ಚಿತ್ರ ಅಭಿ ಬಾಕಿ ಹೈ ಎಂದು ರಾಘವ ಚಡ್ಡಾ ಹೇಳಿದರು.
35 ವಾರ್ಡ್‌ಗಳ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ- 2021 ರ ಮತಗಳ ಎಣಿಕೆ ಸೋಮವಾರ ಬೆಳಿಗ್ಗೆ ಪ್ರಾರಂಭವಾಯಿತು. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್‌ನಲ್ಲಿ ನಿರ್ಣಾಯಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್, ಎಎಪಿ, ಬಿಜೆಪಿ ಮತ್ತು ಅಕಾಲಿದಳ-ಬಿಎಸ್‌ಪಿ ಮೈತ್ರಿಕೂಟ ಇಲ್ಲಿ ತೀವ್ರ ಹಣಾಹಣಿ ನಡೆಸಿದ್ದವು. ಆದರೆ, ಎಎಪಿ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದೆ.
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷದ ಫಲಿತಾಂಶಗಳಿಗಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. “ಎಎಪಿ ಮೊದಲ ಬಾರಿಗೆ ಅಲ್ಲಿ [ಚಂಡೀಗಢದಲ್ಲಿ] ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಮತ್ತು ಚಂಡೀಗಢದ ಜನರು ನಮಗೆ ಭವ್ಯವಾದ ಸ್ವಾಗತವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಪ್ರತಿಯೊಬ್ಬ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ...!

ಅಂತಿಮ ಲೆಕ್ಕಾಚಾರ ಇಲ್ಲಿದೆ:
ಆಮ್‌ ಆದ್ಮಿ ಪಾರ್ಟಿ: 14
ಬಿಜೆಪಿ: 12
ಕಾಂಗ್ರೆಸ್: 8
ಶಿರೋಮಣಿ ಅಕಾಲಿದಳ: 1

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement