ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಮತಾಂತರ ಬಿಲ್ಲು ಹರಿದು ಹಾಕಿದ ಬಗ್ಗೆ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.
ಈ ಪೋಸ್ಟ್ ಬಗ್ಗೆ ಪ್ರಶಾಂತ ಕೋಮುಭಾವನೆ ಕೆರಳಿಸುತ್ತಿದ್ದಾರೆ ಎಂಬುದಾಗಿಸಿ. ಲಕ್ಷ್ಮೀ ನಾರಾಯಣ ಅವರು ಬೆಂಗಳೂರು ದಕ್ಷಿಣ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement