ಡ್ರಗ್ಸ್ ದಂಧೆಯಿಂದ ತನ್ನ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಪತ್ರ ಬರೆದ ಕ್ರೈಸ್ತ ಮಹಿಳೆ: ಆರೋಪಿ ಬಂಧನ

ಮಂಗಳೂರು: ಮಂಗಳೂರು: ಡ್ರಗ್ಸ್ ದಂಧೆಗೆ ಯುವತಿಯನ್ನು ದೂಡಿದ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನೇ ಬಂಧಿತ ಆರೋಪಿ. ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ತಮ್ಮ ಮಗಳಿಗೆ ಆಗುತ್ತಿರುವ ಸಮಸ್ಯೆ ಹಾಗೂ ತಮ್ಮ ಮಗಳಿಗೆ ಮಾದಕ ದ್ರವ್ಯ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂಪರಿಷತ್ ಗೆ ಪತ್ರ ಬರೆದು ಅವಳನ್ನು ರಕ್ಷಣೆ ಮಾಡುವಂತೆ ಮನವಿ ಮಾಡಿದ ನಂತರ ವಿಎಚ್‌ಪಿ ಮುಖಂಡರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಯನ್ನು ಬಂಧಿಸಿಲಾಗಿದೆ.
ಕಳೆದ ಮೂರು ವರ್ಷದಿಂದ ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬವನು ನಿರಂತರವಾಗಿ ತನ್ನ ಮಗಳಿಗೆ ಮಾದಕ ವಸ್ತುಗಳನ್ನು ನಿರಂತರವಾಗಿ ಕೊಟ್ಟು ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದಾಗಿ ಅವಳು ಡ್ರಗ್ಸ್ ಚಟಕ್ಕೆ ಬಿದ್ದು ಅವಳ ಆರೋಗ್ಯ ಹದಗೆಟ್ಟಿದೆ ಮತ್ತು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ. ಸಿದ್ದಿಕ್ ನನ್ನ ಮಗಳನ್ನು ನನ್ನ ಮನೆಯಿಂದ ಕರೆದುಕೊಂಡು ಹೋಗುತ್ತಿದ್ದ. ನಾನು ಪೊಲೀಸರಿಗೆ ಹಾಗೂ ನಮ್ಮ ಧಾರ್ಮಿಕ ಮುಖಂಡರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ಮಾಹಿತಿಯ ಪ್ರಕಾರ, ಸಿದ್ದಿಕ್ ಈಗಾಗಲೇ ಮೂರು ಮದುವೆಯಾಗಿದ್ದಾನೆ ಮತ್ತು ಅವನು ನನ್ನ ಮಗಳ ಜೀವನವನ್ನು ಹಾಳುಮಾಡಿದ್ದಾನೆ. ಈಗ ನನ್ನ ಮತ್ತು ಮಗಳನ್ನು ರಕ್ಷಿಸಿ ಹಾಗೂ ನನಗೆ ನ್ಯಾಯದೊರಕಿಸಿ ಕೊಡಿ ಎಂದು ಮಹಿಳೆ ವಿಶ್ವ ಹಿಂದೂ ಪರಿಷತ್‌ ಬರೆದಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ವಿಎಚ್ ಪಿಗೆ ಮನವಿ ಮಾಡಿದ ಹಿನ್ನಲೆ ವಿಎಚ್ ಪಿ ಮುಖಂಡರಾದ ಶರಣ್ ಪಂಪ್ ವೆಲ್ ಯುವತಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪೊಲೀಸರಿಗೆ ಈ ಸಂಬಂದ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಉರ್ವಾ ಪೊಲೀಸರು ಸಿದ್ದಿಕ್ ಎಂಬಾತನನ್ನು ಬಂಧಿಸಿದ್ದಾರೆ.ಮಹಿಳೆ ಕೊಟ್ಟ ದೂರಿನ ಮೇರೆಗೆ ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement