ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದ ಸಿಎಂ ಬೊಮ್ಮಾಯಿ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಲಿದ್ದಾರೆ ಹಾಗೂ ಸಂಕ್ರಾಂತಿ ನಂತರ ರಾಜ್ಯದಲ್ಲಿ ಅವರ ಬದಲಿಗೆ ಮತ್ತೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ಬೊಮ್ಮಾಯಿ ನಾಟಿ ವೈದ್ಯರಿಂದ ಮೊಣಕಾಲಿಗೆ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಲಭ್ಯವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಲೋಕೇಶ್ ಟೇಕಲ್ ಎಂಬವರನ್ನು ಸಂಪರ್ಕಿಸಿ ಬೊಮ್ಮಾಯಿ ಅವರು ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲೋಕೇಶ್ ಬ್ಲಾಕ್ ಫಂಗಸ್‌ಗೆ ಒಳಗಾದ ವ್ಯಕ್ತಿಯೊಬ್ಬರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದು, ಈ ವಿಷಯವನ್ನು ಲಕ್ಷಣ ಸವದಿ ಮೇಲ್ಮನೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ನಾಟಿ ವೈದ್ಯ ಲೋಕೇಸ್ ಟೇಕಲ್ ಈಗಾಗಲೇ ಕ್ಯಾನ್ಸರ್, ಬ್ಲಾಕ್ ಫಂಗಸ್, ಕೊರೊನಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ವನಸ್ಪತಿ ಔಷಧ ನೀಡಿ ಯಶಸ್ವಿಯಾಗಿದ್ದಾರೆ ಎಂದು ಸವದಿ ಹೇಳಿದ್ದಾರೆ.
ಸದ್ಯ ಮುಖ್ಯಮಂತ್ರಿಗಳಿಗೆ ಮಂಡಿ ನೋವಿನ ಚಿಕಿತ್ಸೆಗಾಗಿ ದಿನಕ್ಕೆ ಎರಡು ಬಾರಿ ಔಷಧದ ಜೊತೆಗೆ ಮೇಕೆ ಹಾಲು ಕುಡಿಯುವಂತೆ ಸಲಹೆ ನೀಡಿದ್ದಾರೆ. ಮೇಕೆ ಹಾಲಿನಲ್ಲಿ ವಿಟಮಿನ್ ಡಿ ಸಹ ಇರುವುದರಿಂದ ಅದು ಮೂಳೆಗಳು ಕ್ಯಾಲ್ಶಿಯಂ ಸೆಳೆದುಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.
ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇದೇ ನಾಟಿ ವೈದ್ಯರಿಂದ ಚರ್ಮ ರೋಗದಿಂದ ಗುಣಮುಖರಾಗಿದ್ದು, ಅವರೇ ಮುಂದಾಗಿ ಮುಖ್ಯಮಂತ್ರಿಗಳಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿದೆ

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement