ದೇಶದಲ್ಲಿ 1,49,297 ಕೋಟಿ ರೂ. ಆದಾಯ ತೆರಿಗೆ ಮರುಪಾವತಿ

ನವದೆಹಲಿ: ದೇಶದಲ್ಲಿ ಈ ವರ್ಷ ಏಪ್ರಿಲ್ 1ರಿಂದ ಈವರೆಗೆ ( December 27)  1,49,297 ಕೋಟಿ ರೂ.ಗಳಿಗೂ ಅಧಿಕ ಆದಾಯ ತೆರಿಗೆ ಮರುಪಾವತಿ ಮಾಡಲಾಗಿದೆ.
1.45 ಕೋಟಿ ತೆರಿಗೆ ಪಾವತಿದಾರರಿಗೆ ಸರಿ ಸುಮಾರು 1.50 ಲಕ್ಷ ಕೋಟಿ ರೂಪಾಯಿ ಮರುಪಾವತಿ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ನೇರ ತೆರಿಗೆ ಮಂಡಳಿ, 2021-22 ನೇ ಸಾಲಿನಲ್ಲಿ 21,021 ಕೋಟಿ ರೂಪಾಯಿ ಆದಾಯ ತೆರಿಗೆ ಸೇರಿದಂತೆ ಒಟ್ಟು ದೇಶದಲ್ಲಿ 1,49,297 ಕೋಟಿ ರೂ.ಗಳ ಆದಾಯ ತೆರಿಗೆ ಮರುಪಾವತಿ ಮಾಡಲಾಗಿದೆ ಎಂದು ಹೇಳಿದೆ.
ಪ್ರಸಕ್ತ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿದವರ ಪರಿಶೀಲನೆ ನಡೆದಿದೆ. ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಿಡಿಬಿಡಿ ತಿಳಿಸಿದೆ.

0 / 5. 0

ಪ್ರಮುಖ ಸುದ್ದಿ :-   ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ನಿಮ್ಮ ಕಾಮೆಂಟ್ ಬರೆಯಿರಿ

advertisement