ಕೋವಿಡ್‌ ಹೆಚ್ಚಳದ ಭೀತಿ: ನಾಳೆಯಿಂದಲೇ ರಾಜ್ಯಾದ್ಯಂತ ಮನೆಮನೆ ಆರೋಗ್ಯ ಸಮೀಕ್ಷೆಗೆ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಓಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮನೆಮನೆ ಆರೋಗ್ಯ ಸಮೀಕ್ಷೆ ನಡೆಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ. ತೀವ್ರ ಉಸಿರಾಟ ಸಮಸ್ಯೆ ಇರುವ ಕೇಸ್​ಗಳ ಸರ್ವೆಗೆ ಆದೇಶ ನೀಡಿದೆ. ಆರೋಗ್ಯ ಸರ್ವೆ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಸರ್ಕಾರ ಆದೇಶ ನೀಡಿದ್ದು ನಾಳೆಯಿಂದ ರಾಜ್ಯಾದ್ಯಂತ ILI (influenza-like illness), SARI (Severe acute respiratory infections) ಕೇಸ್​ಗಳ ಸಮೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ನಾಳೆಯಿಂದ ಅಂದರೆ ಡಿಸೆಂಬರ್‌ ೨೯ರಿಂದ 2022ರ ಜನವರಿ 15ರ ರವರೆಗೆ ಆರೋಗ್ಯ ಸರ್ವೆ ಕಾರ್ಯ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ನಡೆಸಿ ಪೋರ್ಟಲ್​​ನಲ್ಲಿ ವರದಿ ಹಾಕಬೇಕು ಎಂದು ಸೂಚನೆ ನೀಡಲಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement