ದೆಹಲಿಯಲ್ಲಿ ಕೊವಿಡ್​ 19 ಹೆಚ್ಚಳ; ಹಳದಿ ಅಲರ್ಟ್ ಘೋಷಣೆ, ಶಾಲೆ-ಕಾಲೇಜು ಬಂದ್​

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪಾಸಿಟಿವ್ ದರ ಶೇಕಡಾ 0.5 ಕ್ಕಿಂತ ಹೆಚ್ಚಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ.
ಮಂಗಳವಾರ ಕೋವಿಡ್ ಉನ್ನತ ಮಟ್ಟದ ಸಭೆಯಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಜಾರಿಗೊಳಿಸಬೇಕಾದ ನಿರ್ಬಂಧಗಳ ವಿವರವಾದ ಆದೇಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸದ್ಯ ಪತ್ತೆಯಾಗಿರುವ ಕೋವಿಡ್-19 ಪ್ರಕರಣಗಳು ಸೌಮ್ಯ ಸ್ವರೂಪದ್ದಾಗಿದ್ದು, ಆಮ್ಲಜನಕದ ಬಳಕೆ ಅಥವಾ ವೆಂಟಿಲೇಟರ್ ಬಳಕೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದರಿಂದ ನಿರ್ಬಂಧದ ಕ್ರಮ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಯೆಲ್ಲೋ ಅಲರ್ಟ್ ಘೋಷಣೆಯಲ್ಲಿ ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡುವುದು, ಸಮ-ಬೆಸ ಆಧಾರದ ಮೇಲೆ ಅನಿವಾರ್ಯವಲ್ಲದ ಅಂಗಡಿಗಳನ್ನು ತೆರೆಯುವುದು. ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರ ಪ್ರಯಾಣಿಸಬೇಕು. ಖಾಸಗಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5ವರೆಗೆ ಕೆಲಸ ಮಾಡಬಹುದು. ಆದರೆ ಅರ್ಧದಷ್ಟು ಮಾತ್ರ ಉದ್ಯೋಗಿಗಳು ಆಫೀಸ್​ಗೆ ಬರಬೇಕು ಸ್ಪಾಗಳು, ಜಿಮ್​, ಯೋಗಾ ಸಂಸ್ಥೆಗಳು, ಮನರಂಜನಾ ಪಾರ್ಕ್​ಗಳು ಬಂದ್‌, ಸಾಮಾಜಿಕ, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳು, ಮನರಂಜನಾ ಕಾರ್ಯಕ್ರಮಗಳು, ಸಾರ್ವಜನಿಕ ಹಬ್ಬ ಆಚರಣೆಗಳಿಗೆ ನಿರ್ಬಂಧ, ರೆಸ್ಟೋರೆಂಟ್​ಗಳು ಬೆಳಗ್ಗೆ 8ಗಂಟೆಯಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತವೆ. ಆದರೆ ಶೇ.50ರಷ್ಟು ಸಾಮರ್ಥ್ಯಕ್ಕೆ ಅವಕಾಶ. ಹಾಗೇ, ಬಾರ್​ಗೂ ಇದೇ ಅನ್ವಯ ಆಗುತ್ತವೆ. ಆದರೆ ಬಾರ್​ಗಳು ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಮಾತ್ರ ತೆರೆದಿರುತ್ತವೆ ಇವೇ ಮೊದಲಾದ ಕ್ರಮಗಳನ್ನು ಒಳಗೊಂಡಿದೆ.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement