ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ, ಕೇರಳಕ್ಕೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಒಟ್ಟಾರೆ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನಕ್ಕೆ ಕುಸಿದಿದೆ.
ಕೇರಳ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ. 2018-19ರ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 16ನೇ ಸ್ಥಾನದಲ್ಲಿತ್ತು. ಈ ವರ್ಷ 19ನೇ ಸ್ಥಾನಕ್ಕೆ ಕುಸಿದಿದೆ ಮತ್ತು ಒಟ್ಟಾರೆ ಸೂಚ್ಯಂಕದಲ್ಲಿ 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದೆ.
ದಕ್ಷಿಣದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ತೀವ್ರ ಕುಸಿತವನ್ನು ಕಂಡಿದೆ. ವಿವಿಧ ನಿಯತಾಂಕಗಳಲ್ಲಿ ರಾಜ್ಯದ ಒಟ್ಟಾರೆ ಸ್ಕೋರ್ 59.29 ರಿಂದ 57.93 ಕ್ಕೆ ಕುಸಿದಿದೆ.
ದೇಶಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸ್ಥಿತಿಯನ್ನು ಆಧರಿಸಿ, ಆರೋಗ್ಯ ಸೂಚ್ಯಂಕವನ್ನು ಬಿಡುಗಡೆ ಮಾಡಲಾಗಿದೆ. ದೊಡ್ಡ ರಾಜ್ಯಗಳ ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ಸಾಧನೆ ತೋರಿ, ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದರೆ ಕರ್ನಾಟಕ 9ನೇ ಸ್ಥಾನದಲ್ಲಿದೆ ಹಾಗೂ ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.
ನೀತಿ ಆಯೋಗವು ಕಳೆದ ನಾಲ್ಕು ವರ್ಷಗಳಿಂದ ಈ ಸೂಚ್ಯಂಕ ಬಿಡುಗಡೆ ಮಾಡುತ್ತಿದ್ದು, 2019-20ರ ದಾಖಲೆಗಳನ್ನು ಆಧರಿಸಿ ಈಗ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement