ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾರತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ

ಪಂಜಾಬ್ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಭಾಋತದ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ
ನವದೆಹಲಿ: ಭಾರತದ ಕ್ರಿಕೆಟ್‌ ತಂಡದ ಮಾಜಿ ಆಟಗಾರ ದಿನೇಶ್ ಮೊಂಗಿಯಾ ಪಂಜಾಬ್ ಚುನಾವಣೆಗೂ ಮುನ್ನ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತಮ್ಮ ರಾಜಕೀಯದ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ.
ದೆಹಲಿಯ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೊಂಗಿಯಾ(44) ಅವರು ಸೇರ್ಪಡೆಯಾಗಿದ್ದು, ಈ ವೇಳೆ ಕೇಂದ್ರದಲ್ಲಿ ಆಡಳಿತ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ದಿನೇಶ್ ಮೊಂಗಿಯಾ ಅವರು ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆ ಬಿಜೆಪಿ ಸೇರಿದ್ದಾರೆ. ಈ ವೇಳೆ ಪಂಜಾಬಿನ ಮೂವರು ಕಾಂಗ್ರೆಸ್‌ ಶಾಸಕರಾದ ಫತೇ ಜಂಗ್ ಬಾಜ್ವಾ, ಬಲ್ವಿಂದರ್ ಸಿಂಗ್ ಲಡ್ಡಿ ಮತ್ತು ರಾಣಾ ಗುರ್ಮೀತ್ ಸೋಧಿ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಕ್ರಿಕೆಟಿಗರು ಚುನಾವಣೆಗೂ ಮುನ್ನ ರಾಜಕೀಯ ಪಕ್ಷ ಸೇರುವುದು ಸಾಮಾನ್ಯವಾಗಿದೆ. ಈ ಹಿಂದೆಯೂ 2019ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು. ಈ ವೇಳೆ ಅವರು ಆಮ್ ಆದ್ಮಿ ಪಕ್ಷದ ಪ್ರತಿಸ್ಪರ್ಧಿ ಅತಿಶಿ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| 'ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ' ಎಂದ ಕಾಂಗ್ರೆಸ್‌ ಹಿರಿಯ ನಾಯಕ...! ಟಿಎಂಸಿ ಕೆಂಡ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement