ಮದ್ಯ ಖರೀದಿಸಲು ಹಣ ನೀಡದ್ದಕ್ಕೆ ಗೆಳತಿಯ ಮೂಗನ್ನೇ ಕತ್ತರಿಸಿದ ಭೂಪ..!

ಖಾಂಡ್ವಾ (ಮಧ್ಯಪ್ರದೇಶ): ಮದ್ಯ ಖರೀದಿಸಲು ತನ್ನ ಸಂಗಾತಿ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಂಡ್ವಾದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟ್ನರಿನ ಮೂಗನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದು, ಆತನನ್ನು ನಂತರ ಬಂಧಿಸಲಾಗಿದೆ.
ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಲವಕುಶ ಪಟೇಲ್ ಎಂದು ಗುರುತಿಸಲಾಗಿದೆ. ಮದ್ಯ ಖರೀದಿಸಲು ತನ್ನ ಸಂಗಾತಿ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಟೇಲ್ ಮೂಗು ಕತ್ತರಿಸಿದ್ದಾನೆ.
ಪಟೇಲ್ ಮತ್ತು 35 ವರ್ಷದ ಸೋನು ಕಳೆದ ಎರಡು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಪ್ರಭಾರಿ ಬಲ್ಜೀತ್ ಸಿಂಗ್ ಬಿಶನ್ ಹೇಳಿದ್ದಾರೆ.
ವರದಿಗಳ ಪ್ರಕಾರ, ಶನಿವಾರ ಬೆಳಿಗ್ಗೆ ಪಟೇಲ್ ಮದ್ಯ ಖರೀದಿಸಲು ಸೋನು ಅವರಿಂದ 200 ರೂ. ಹಣ ಕೇಳಿದ್ದಾನೆ. ಹಣ ಕೊಡಲು ಸೋನು ನಿರಾಕರಿಸಿದಾಗ ಸಿಟ್ಟಿಗೆದ್ದ ಪಟೇಲ್ ಆಯುಧದಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದಿದ್ದಾರೆ ಹಾಗೂ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ಆರೋಪಿ ಓಡಿ ಹೋಗಿದ್ದಾನೆ. ಪೊಲೀಸರು ಸಂತ್ರಸ್ತೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂತ್ರಸ್ತೆಯ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸಂಜೆ ವೇಳೆಗೆ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಭಾನುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೈಲಿಗೆ ಕಳುಹಿಸಲಾಗಿದೆ ಎಂದು ಬಲ್ಜೀತ್ ಸಿಂಗ್ ಬಿಶನ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement